spot_img
Sunday, March 15, 2026
spot_img

ಅಮಾಸೆಬೈಲು: ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುಂದಾಪುರ-2 ಯೋಜನಾ ಕಚೇರಿ ವ್ಯಾಪ್ತಿಯ ಅಮಾಸೆಬೈಲು ವಲಯದ ಮಹಿಳಾ ಜ್ಞಾನವಿಕಾsಸ ಕಾರ್ಯಕ್ರಮದಡಿಯಲ್ಲಿ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ ನೇತ್ರಾಲಯ ಸೂಪರ್ ಸ್ಪೇಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಲಾಡಿ, ಉಪ ಕೇಂದ್ರ ಅಮಾಸೆಬೈಲು, ಆಯುರ್ವೇದಿಕ್ ಚಿಕಿತ್ಸಾ ಕೇಂದ್ರ ಅಮಾಸೆಬೈಲು ಇವರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣಾ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರವನ್ನು ಅಮಾಸೆಬೈಲು ಹಾಲಿನ ಉತ್ಪಾದಕರ ಸಹಕಾರಿ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಧ.ಗ್ರಾ ಯೋಜನೆ ತಾಲೂಕು ಯೋಜನಾಧಿಕಾರಿ ನಾರಾಯಣ ಪಾಲನ್ ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ರಟ್ಟಾಡಿ ನವೀನ್ ಚಂದ್ರ ಶೆಟ್ಟಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾದ ಹಿರಿಯ ಅಧಿಕಾರಿ ಡಾ. ಹೇಮಲತಾ, ಪ್ರಸಾದ ನೇತ್ರಾಲಯ ಉಡುಪಿ ಇಲ್ಲಿನ ಸಾರ್ವಜನಿಕ ಸಂಪರ್ಕ ಅಧಿಕಾರಿ ಮೋಹನ್ ದಾಸ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಲಯಾಧ್ಯಕ್ಷರಾದ ಭೋಜರಾಜ್ ವಹಿಸಿದರು. ಕಾರ್ಯಕ್ರಮದಲ್ಲಿ ಡಾ.ಮೇಘನಾ ನೇತ್ರ ತಜ್ಞರು ಪ್ರಸಾದ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉಡುಪಿ, ಅಮಾಸೆಬೈಲು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಲಕ್ಷ್ಮಣ ಪೂಜಾರಿ , ಅಮಾಸೆಬೈಲು ಪ್ರಾಥಮಿಕ ಆರೋಗ್ಯ ಕೇಂದ್ರದ ಮನೋಜ, ಗ್ರಾ.ಪಂ. ಸದಸ್ಯರಾದ ಕೃಷ್ಣಪೂಜಾರಿ, ರೊಯನ, ಆಯುರ್ವೇದಿಕ ಚಿಕಿತ್ಸಾಲಯದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಅಮಾಸೆಬೈಲು ವಲಯದ ಮೇಲ್ವಿಚಾರಕ ಸಂದೀಪ್, ಒಕ್ಕೂಟದ ಅಧ್ಯಕ್ಷೆ ಯಶೋದ ಶೆಡ್ತಿ, ಜ್ಞಾನವಿಕಾಸ ಸಮನ್ವಯದಿಕಾರಿ ಕವಿತಾ, ತಾಲೂಕು ನೋಡಲ ಅಧಿಕಾರಿ ಲೋಹಿತ್, ಅಮಾಸೆಬೈಲು ವಲಯದ ಸೇವಾಪ್ರತಿನಿಧಿಗಳು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ವಲಯ ಮೇಲ್ವಿಚಾರಕ ಸಂದೀಪ್ ಕಾರ್ಯಕ್ರಮ ನಿರೂಪಿಸಿ, ಜ್ಞಾನವಿಕಾಸ ಸಮನ್ವಾಧಿಕಾರಿ ಕವಿತಾ ಸ್ವಾಗತಿಸಿ, ಸೇವಾ ಪ್ರತಿನಿಧಿ ಗೀತಾ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!