spot_img
Monday, March 16, 2026
spot_img

ಅಡಿಕೆ ಕೊಯ್ಲು ಉಪಕರಣಗಳ ಸಹಾಯಧನವನ್ನು ಹೆಚ್ಚಿಸಿ ಕೇಂದ್ರದ ಆದೇಶ-ಬಿ.ವೈ. ರಾಘವೇಂದ್ರ

ಶಿವಮೊಗ್ಗ : ಅಡಿಕೆ ಬೆಳೆಗಾರರನ್ನು ಬೆಂಬಲಿಸುವ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅಡಿಕೆಕೊಯ್ಲು ಉಪಕರಣಗಳ ಮೇಲಿನ ಸಹಾಯಧನವನ್ನು ಹೆಚ್ಚಿಸಿ, ಆತ್ಯಾಧುನಿಕ ಕೃಷಿ ಉಪಕರಣಗಳನ್ನು ಕೈಗೆಟುಕುವಂತೆ ಮಾಡುವಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿರುವುದು ತೋಟಗಾರಿಕೆ ಬೆಳೆಗಾರರಲ್ಲಿ ಸಂತಸ ಮೂಡಿಸಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಅವರು ತಿಳಿಸಿದ್ದಾರೆ.

ಕಳೆದ ತಿಂಗಳಲ್ಲಿ ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘವು ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಭಾಗವಹಿಸಿದ್ದ ಕೇಂದ್ರ ಸರ್ಕಾರದ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಅಡಿಕೆ ಬೆಳೆಗಾರರ ಸಮಾವೇಶದಲ್ಲಿ ರೈತರನ್ನು ಬೆಂಬಲಿಸಲು ಅಡಿಕೆ ಕೊಯ್ಲು ಉಪಕರಣಗಳ ಮೇಲಿನ ಸಹಾಯಧನವನ್ನು ಹೆಚ್ಚಿಸುವಂತೆ ಮನವಿಯನ್ನು ಮಾಡಲಾಗಿತ್ತು. ಅಲ್ಲದೇ ಪತ್ರ ಬರೆದು ಒತ್ತಾಯಿಸಲಾಗಿತ್ತು ಎಂದ ಅವರು ನಮ್ಮ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಕೃಷಿ ಯಾಂತ್ರೀಕರಣ ಉಪ ಅಭಿಯಾನದ ಅಡಿ ಟೆಲಿಸ್ಕೊಪಿಕ್ ಟ್ರಿ-ಪ್ರೂನರ್ (ಅಚಿಡಿboಟಿ ಆoಣi)ಗೆ ಸಹಾಯಧನದ ಮೊತ್ತವನ್ನು ಪರಿಷ್ಕರಿಸಿ ಆದೇಶ ಹೊರಡಿಸಿದೆ ಎಂದವರು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ ಅತೀ ಸಣ್ಣ ರೈತರು ಹಾಗೂ ಮಹಿಳೆಯರಿಗೆ ನೀಡಲಾಗುತ್ತಿದ್ದ ಶೇ.50 ರ ಸಹಾಯಧನ ಗರಿಷ್ಠ ಮೊತ್ತ ರೂ.5000/-ಗಳಿಂದ ರೂ.40,000/-ಗಳಿಗೆ ಹೆಚ್ಚಿಸಲಾಗಿದೆ. ಅಂತೆಯೇ ಸಾಮಾನ್ಯ ವರ್ಗದ ಕೃಷಿಕರಿಗೆ ನೀಡಲಾಗುತ್ತಿದ್ದ ಶೇ.40ರ ಸಹಾಯಧನದಂತೆ ಗರಿಷ್ಠ ಮೊತ್ತ ರೂ. 4000/-ಗಳಿಂದ ರೂ.32,000/-ಗಳಿಗೆ ಹೆಚ್ಚಿಸಿ ಪರಿಷ್ಕರಿಸಿದ ಆದೇಶ ಹೊರಡಿಸಿದೆ. ಇದರಿಂದಾಗಿ ಅಡಿಕೆ ಬೆಳೆಗಾರರಿಗೆ ನಿರೀಕ್ಷಿತ ಸಹಕಾರ ದೊರೆತಂತಾಗಿದೆ ಎಂದವರು ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಅಡಿಕೆಯು ಒಂದು ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು ಸರಿ ಸುಮಾರು 1,37,407 ಹೆಕ್ಟೇರ್ ಪ್ರದೇಶವನ್ನು ಆವರಿಸಿಕೊಂಡಿದೆ. ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಟೆಲಿಸ್ಕೊಪಿಕ್ ಟ್ರಿ-ಪ್ರೂನರ್ ಉಪಕರಣವು ಅಡಿಕೆ ಕಟಾವು ಮಾಡಲು ಹಾಗೂ ಔಷಧಿ ಸಿಂಪರಣೆ ಮಾಡಲು ಅತ್ಯುಪಯುಕ್ತವಾಗಿರುವುದನ್ನು ಅರಿತು ಎಲ್ಲಾ ಅಡಿಕೆ ಬೆಳೆಗಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸಹಕರಿಸುವ ನಿಟ್ಟಿನಲ್ಲಿ ಕೇಂದ್ರಕ್ಕೆ ಮಾಡಿದ ಮನವಿ ಸಫಲವಾಗಿದೆ. ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸಕಾಲದಲ್ಲಿ ಔಷಧಿ ಸಿಂಪರಣೆ ಮಾಡುವ ನೈಪುಣ್ಯತೆವುಳ್ಳ ಕೂಲಿ ಕಾರ್ಮಿಕರ ಅಭಾವವಿರುವುದರಿಂದ ಸದರಿ ಉಪಕರಣವು ಅತ್ಯಂತ ಉಪಯುಕ್ತವಾಗಲಿದೆ. ಮಾತ್ರವಲ್ಲ ಕೂಲಿಕಾರರನ್ನು ಹುಡುಕುವುದರಿಂದ ಮುಕ್ತಿ ದೊರೆಯಲಿದೆ ಎಂದವರು ಆಶಿಸಿದ್ದಾರೆ.

ಟೆಲಿಸ್ಕೊಪಿಕ್ ಟ್ರಿ-ಪ್ರೂನರ್ ಉಪಕರಣವು ತುಕ್ಕು ರಹಿತ, ಹಗುರವಿರುವುದರಿಂದ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸುಲಭವಾಗಿ ಕೊಂಡೊಯ್ಯಬಹುದಾಗಿದೆ. ಅತೀ ಎತ್ತರಕ್ಕೆ (20 ಅಡಿಯಿಂದ 80 ಅಡಿ) ಔಷಧಿ ಸಿಂಪರಣೆ ಮಾಡುವಾಗ ಕೂಡ ಸ್ಥಿರವಾಗಿರುವುದರಿಂದ ಸದರಿ ಉಪಕರಣಕ್ಕೆ ಹೆಚ್ಚಿನ ಬೇಡಿಕೆಯಿದ್ದು, ಇದರಿಂದ ಅಡಿಕೆ ಬೆಳೆಗಾರ ರೈತರ ಜೀವನ ಮಟ್ಟವು ಹೆಚ್ಚು ಆರ್ಥಿಕವಾಗಿ ಸುಭದ್ರವಾಗಲಿದೆ ಎಂದು ಸಂಸದರಾದ ಬಿ ವೈ. ರಾಘವೇಂದ್ರ ರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಮ್ಮ ಕೋರಿಕೆಯನ್ನು ಪುರಸ್ಕರಿಸಿ, ಅಡಿಕೆಕೊಯ್ಲು ಉಪಕರಣಗಳ ಮೇಲಿನ ಸಹಾಯಧನವನ್ನು ಹೆಚ್ಚಿಸಿ, ಆತ್ಯಾಧುನಿಕ ಕೃಷಿ ಉಪಕರಣಗಳನ್ನು ಕೈಗೆಟುಕುವಂತೆ ಮಾಡುವಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿ, ಸಹಾಯಧನ ಬಿಡುಗಡೆಗೊಳಿಸಿ ಪ್ರೋತ್ಸಾಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದೀಜಿ ಮತ್ತು ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶಿವರಾಜ್ ಸಿಂಗ್ ಚೌವ್ಹಾಣ್ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!