spot_img
Thursday, March 5, 2026
spot_img

ಶಂಕರನಾರಾಯಣ ಮದರ್ ತೆರೆಸಾ ಕಾಲೇಜಿನಲ್ಲಿ ಪೊಲೀಸ್ ಮಾಹಿತಿ ಕಾರ್ಯಕ್ರಮ

ಶಂಕರನಾರಾಯಣ :ಮದರ್ ತೆರೆಸಾ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ವಸ್ತುಗಳ ಅಪಾಯ, ಸೈಬರ್ ಭದ್ರತೆ, ರಸ್ತೆ ಸುರಕ್ಷತೆಯ ನಿಯಮಗಳು ಮತ್ತು ಪೋಕ್ಸೋ ಕಾಯ್ದೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಉದ್ದೇಶದಿಂದ ಜಾಗೃತಿ ಕಾರ್ಯಕ್ರಮವನ್ನು ಜು.16ರಂದು ಪೊಲೀಸ್ ಇಲಾಖಾ ಅಧಿಕಾರಿ ವರ್ಗದವರ ಸಹಕಾರದೊಂದಿಗೆ ಆಯೋಜಿಸಲಾಯಿತು.

ಈ ಕಾರ್ಯಕ್ರಮಕ್ಕೆ ಆಗಮಿಸಿದ ಶಂಕರನಾರಾಯಣ ಠಾಣೆಯ ಉಪ ನಿರೀಕ್ಷಕ ತನಿಖಾಧಿಕಾರಿ ಶಂಭುಲಿಂಗಯ್ಯ ಅವರು ಮಾತನಾಡಿ “ಮಾದಕ ವ್ಯಸನದಿಂದ ದೂರವಿದ್ದು ಜೀವನವನ್ನು ಸಂತೋಷದಿಂದ ಅನುಭವಿಸಿ” ಎಂದು ಹಿತನುಡಿಗಳನ್ನಾಡಿದರು.

ಶಂಕನಾರಾಯಣ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ನಾಸಿರ್ ಹುಸೈನ್ ಅವರು ಇಂದು ಸಾಮಾಜಿಕ ಜಾಲತಾಣಗಳ ದುರುಪಯೋಗದಿಂದಾಗಿ ಹಾಗೂ ವಿದ್ಯಾರ್ಥಿಗಳ ಅತಿಯಾದ ಮೊಬೈಲ್ ಬಳಕೆಯಿಂದ ಆಗುವ ಅನಾಹುತಗಳು, ಮೊಬೈಲ್ ಗೇಮಿಂಗ್ ಅಪಾಯಗಳ ಬಗ್ಗೆ ತಿಳಿ ಹೇಳುವುದರ ಮೂಲಕ ಅದನ್ನು ಹೇಗೆ ಜವಾಬ್ದಾರಿಯಿಂದ ಬಳಸಬೇಕು ಎನ್ನುವುದರ ಕುರಿತು ಮಾಹಿತಿ ನೀಡಿದರು.

ಕುಂದಾಪುರ ವೃತ್ತ ನಿರೀಕ್ಷಕರಾದ ಜಯರಾಮ್. ಬಿ. ಗೌಡ ರಸ್ತೆ ನಿಯಮಗಳ ಉಲ್ಲಂಘನೆಯಿಂದಾಗಿ ಆಗುವ ಅನಾಹುತಗಳ ಬಗ್ಗೆ ಮಾತನಾಡಿ, ನಮ್ಮ ಜೀವದ ರಕ್ಷಣೆಗೆ ರಸ್ತೆ ನಿಯಮಗಳ ಪಾಲನೆ ಅಗತ್ಯ ಎಂದು ತಿಳಿಸುತ್ತಾ ಪರವಾನಿಗೆ ರಹಿತ ವಾಹನ ಚಾಲನೆ ತಪ್ಪು ಎನ್ನುವುದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ಮತ್ತು ಪೋಕ್ಸೋ ಕಾಯ್ದೆ ಕುರಿತು ಅರಿವು ಮೂಡಿಸುತ್ತ ಪೋಕ್ಸೋ ಕಾಯ್ದೆ ಮಕ್ಕಳಿಗೆ ಕಾನೂನು ಕವಚ’ ಮಕ್ಕಳಿಗೆ ಭಯವಿಲ್ಲದ ಬದುಕು ಕಟ್ಟಿಕೊಡುವುದು ನಮ್ಮ ಕರ್ತವ್ಯವೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯವರು, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಮದರ್ ತೆರೇಸಾ ಮೆಮೋರಿಯಲ್ ಶಾಲೆಯ ಮುಖ್ಯೋಪಾಧ್ಯಾಯಿನಿ ಹಾಗೂ ಉಪನ್ಯಾಸಕ, ಶಿಕ್ಷಕ ವೃಂದ ದವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕಿ ವೈಶಾಲಿ. ಎಸ್. ಶೆಟ್ಟಿ ನಿರೂಪಿಸಿದರು. ಭಾಷಾ ಹಾಗೂ ಸಾಂಸ್ಕೃತಿಕ ನಿರ್ದೇಶಕಿ ಅಲಿಟಾ ಡೇಸಾ ವಂದಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!