spot_img
Saturday, February 14, 2026
spot_img

ಹಾಲಾಡಿ ಪ್ರೌಢಶಾಲೆ: ಯಕ್ಷಗಾನ ಹೆಜ್ಜೆ ತರಗತಿ ಉದ್ಘಾಟನೆ

ಹಾಲಾಡಿ: ನಮ್ಮ ಸಂಸ್ಕೃತಿಯ ಉಳಿವಿಗಾಗಿ ಹಾಗೂ ಉತ್ತಮ ಸಂಸ್ಕಾರಕ್ಕಾಗಿ ವಿದ್ಯಾರ್ಥಿಗಳು ಯಕ್ಷಗಾನ ಕಲಿಯಬೇಕೆಂದು ಹೆಗ್ಗುಂಜೆ ರಾಜೀವ ಶೆಟ್ಟಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಯಕ್ಷ ಶಿಕ್ಷಣ ಟ್ರಸ್ಟ್ (ರಿ) ಉಡುಪಿ ವತಿಯಿಂದ ನಡೆಯುವ ಯಕ್ಷಗಾನ ಹೆಜ್ಜೆ ತರಗತಿ ಉದ್ಘಾಟನೆ ಮಾಡಿದ ಬಡಗುತಿಟ್ಟಿನ ಪ್ರಸಿದ್ಧ ಯಕ್ಷಗಾನ ಕಲಾವಿದರಾದ
ವಿಶ್ವನಾಥ ಆಚಾರ್ಯ ತೊಂಬಟ್ಟು ಇವರು ಹೇಳಿದರು.

ಪುರಾಣದ ಕಥೆಯ ಮೂಲಕ ಮಕ್ಕಳಲ್ಲಿ ನೈತಿಕತೆ ವೃದ್ಧಿಯಾಗುತ್ತದೆಂದು ಯಕ್ಷ ಗುರು ಮಹೇಶ್ ಕುಮಾರ್ ಮಂದಾರ್ತಿ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸತೀಶ್ ಹೆಗ್ಡೆ ವಹಿಸಿದ್ದರು. ಶಿಕ್ಷಕ ರತ್ನಾಕರ್ ಸ್ವಾಗತಿಸಿದರು.ಮುಖ್ಯ ಶಿಕ್ಷಕಿ ರೋಶನ್ ಬೀಬಿ ಹಾಗೂ ಅದ್ಯಾಪಕ ವೃಂದದವರು ಉಪಸ್ಥಿತರಿದ್ದರು.

ಶಿಕ್ಷಕ ಕೆ.ಹರಿಶ್ಚಂದ್ರ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ ಆನಂದ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!