spot_img
Monday, March 16, 2026
spot_img

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್ ಇನ್ನಿಲ್ಲ

ಕುಂದಾಪುರ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ, ಪಾತಾಳ ವೆಂಕಟರಮಣ ಭಟ್ (92ವ) ಅವರು ಜುಲೈ 19ರಂದು (ಇಂದು) ಉಪ್ಪಿನಂಗಡಿಯ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.

ಯಕ್ಷಗಾನದ ತೆಂಕು-ಬಡಗು ಎರಡು ತಿಟ್ಟುಗಳಲ್ಲಿಯೂ ಸಮಾನ ನೈಪುಣ್ಯತೆ ಸಂಪಾದಿಸಿದ ಇವರು ಮೂಲ್ಕಿ ಮೇಳ, ಸುರತ್ಕಲ್, ಸೌಕೂರು ಮೇಳ, ಧರ್ಮಸ್ಥಳ ಮೇಳಗಳಲ್ಲಿ ತಿರುಗಾಟ ಮಾಡಿದ್ದರು.

ರಂಭೆ, ಊರ್ವಶಿ, ಮೇನಕೆ, ಸತ್ಯಭಾಮೆ, ಸ್ವಯಂಪ್ರಭೆ, ಸುಭದ್ರೆ, ದೌಪದಿ, ಮೀನಾಕ್ಷಿ ಮುಂತಾದ ಪಾತ್ರಗಳಿಂದ ಜನಪ್ರಿಯರಾಗಿದ್ದರು. ಇವರ ಕಲಾಸೇವೆಗೆ ಹಲವು ಪ್ರಶಸ್ತಿಗಳು ಲಭಿಸಿದ್ದು ಚೆನ್ನೈನ ಹಿಂದೂಧರ್ಮ ಸಂಘವು ಮಣಿವಿಳಾ ಬಿರುದು, ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿ, ಯಕ್ಷಗಾನ ಕಲಾರಂಗ ಪ್ರಶಸ್ತಿ, ವಿಟ್ಲ ಗೋಪಾಲಕೃಷ್ಣ ಭಟ್ ಪ್ರತಿಷ್ಟಾನ ಪ್ರಶಸ್ತಿ, ವಿದ್ಯಾಮಾನ್ಯ ಪ್ರಶಸ್ತಿ, ಯಕ್ಷ ಕಲಾನಿಧಿ ಪ್ರಶಸ್ತಿ, ಕರಾವಳಿ ಯಕ್ಷಗಾನ ಮಂಡಳಿ, ಬಿ.ಬಿ.ಶೆಟ್ಟಿ ಪ್ರಶಸ್ತಿ, ಪಟ್ಟಾಜೆ ಪ್ರಶಸ್ತಿ, ದೇರಾಜೆ ಪ್ರಶಸ್ತಿ, ಕಲ್ಕೂರ ಪ್ರಶಸ್ತಿ, ಅಗರಿ ಪ್ರಶಸ್ತಿ ಲಭಿಸಿದ್ದವು.

ತೆಂಕು-ಬಡಗಿನ ಪರಂಪರೆಯ ಕೊಂಡಿಯಂತಿದ್ದ ಅವರು ಸ್ತ್ರೀಭೂಮಿಕೆಗೆ ವಿಶೇಷ ಒತ್ತು ನೀಡಿದ್ದರು. ಅವರು ಸ್ತ್ರೀಭೂಮಿಕೆಯಲ್ಲಿ ಅಳವಡಿಸಿದ ನೃತ್ಯಭಂಗಿಗಳು  ಜನಪ್ರಿಯವಾಗಿವೆ.

ಪುತ್ರ ಅಂಬಾಪ್ರಸಾದ್ ಪಾತಾಳ ಸಹಿತ ಇಬ್ಬರು ಪುತ್ರರು ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!