spot_img
Monday, March 16, 2026
spot_img

‘ಸಹಕಾರ ರತ್ನ’ ಪ್ರಶಸ್ತಿ ಪುರಸ್ಕೃತ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಅವರಿಗೆ ಸಹಕಾರಿಗಳಿಂದ ಅಭಿನಂದನೆ

ಜನಪ್ರತಿನಿಧಿ ವಾರ್ತೆ] ಕುಂದಾಪುರ: ಸಹಕಾರ, ಕೃಷಿ, ಹೈನುಗಾರಿಕೆ, ರಾಜಕೀಯ, ಧಾರ್ಮಿಕ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಪ್ರಕಾಶ್ಚಂದ್ರ ಶೆಟ್ಟಿಯವರು ಮಿಂಚಿದ್ದಾರೆ. ತನ್ನ ಮೇಲಿನ ಜವಬ್ದಾರಿಗಳನ್ನು ಅತ್ಯಂತ ನಿಷ್ಠೆಯಿಂದ ನಿರ್ವಹಿಸಿದ್ದಾರೆ. ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಸಟೆದು ನಿಲ್ಲುವ, ನಿಷ್ಟೂರವಾದಿ ವ್ಯಕ್ತಿತ್ವ ಇವರದ್ದು. ಇವರ ಸಾಧನೆಗೆ ಯೋಗ್ಯವಾಗಿಯೇ ಸಹಕಾರ ರತ್ನ ಪ್ರಶಸ್ತಿ ಲಭಿಸಿದೆ ಎಂದು ದ.ಕ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆ ಹೇಳಿದರು.

ಅವಿಭಜಿತ ಕುಂದಾಪುರ ತಾಲೂಕಿನ ಕೃಷಿಪತ್ತಿನ ಸಹಕಾರಿ ಸಂಘಗಳ ವತಿಯಿಂದ 2024-25ನೇ ಸಾಲಿನ ಕರ್ನಾಟಕ ಸರ್ಕಾರ ಕೊಡಮಾಡುವ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಖಂಬದಕೋಣೆ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಅವರಿಗೆ ಜು.20ರಂದು ಕುಂದಾಪುರದ ಬಂಟರ ಯಾನೆ ನಾಡವರ ಸಂಘದ ಆರ್.ಎನ್.ಶೆಟ್ಟಿ ಸಭಾಭವನದಲ್ಲಿ ಆಯೋಜಿಸಲಾದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ನೆರವೇರಿಸಿ ಮಾತನಾಡಿದರು.

ಪ್ರಕಾಶ್ಚಂದ್ರ ಶೆಟ್ಟಿಯವರ ಛಾಪು ಎಲ್ಲ ಕ್ಷೇತ್ರದಲ್ಲೂ ವ್ಯಾಪಿಸಿದೆ. ಕೃಷಿಕ್ಷೇತ್ರಕ್ಕೆ ಆಧುನಿಕ ಸ್ಪರ್ಶ ಮಾಡಿ ಕೃಷಿವಲಯವನ್ನು ಲಾಭದಾಯಕ ಕ್ಷೇತ್ರ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ಒಕ್ಕೂಟಕ್ಕೆ ಅತೀ ಹೆಚ್ಚು ಹಾಲು ಸರಬರಾಜು ಮಾಡುವ ಹೈನುಗಾರರಾಗಿ, 10 ಸಾವಿರ ಲೀಟರ್ ಸಾಮಾರ್ಥ್ಯದ ಸಾಂಧ್ರಶೀತಲಿಕರಣ ಘಟಕವನ್ನು ಸ್ಥಾಪಿಸಿ ಹೈನುಗಾರನ್ನುನ ಉತ್ತೇಜಿಸಿದ್ದಾರೆ. ಸಹಕಾರ, ಹೈನೋದ್ಯಮ, ಕೃಷಿ ಕ್ಷೇತ್ರದಲ್ಲಿ ಮಹತ್ತರವಾದ ಬದಲಾವಣೆಗೆ ಇವರು ಕಾರಣರಾಗಿದ್ದಾರೆ. ರೈತ, ಸಹಕಾರಿಗಳ ಮಾರ್ಗದರ್ಶಕರಾಗಿ ಸಹಕಾರ ಚಳವಳಿಗೆ ಈ ಭಾಗದಲ್ಲಿ ಪ್ರಕಾಶ್ಚಂದ್ರ ಶೆಟ್ಟಿ ಅವರ ಕೊಡುಗೆ ಪ್ರಮುಖವಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರಾದ ಎಂ.ಮಹೇಶ ಹೆಗ್ಡೆ ವಹಿಸಿದ್ದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಅವರು.ಸಹಕಾರ ಕ್ಷೇತ್ರ ನನಗೆ ಎಲ್ಲವನ್ನು ಕೊಟ್ಟಿದೆ. ಸಹಕಾರ ಚಳವಳಿಯ ಪ್ರಭಾವವನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ಸಹಕಾರ ರಂಗದಲ್ಲಿ ದುಡಿದ ಬಗ್ಗೆ ಹೆಮ್ಮೆ ಇದೆ. ಇದು ನನಗೆ ಸಮಾಜದಲ್ಲಿ ಶ್ರೇಷ್ಠವಾದ ಗೌರವವನ್ನು ತಂದುಕೊಟ್ಟಿದೆ. ಕೆಲವೊಂದು ಸಂದರ್ಭದಲ್ಲಿ ಸಹಕಾರ ಸಂಘದ ವಿಚಾರದಲ್ಲಿ ಆಹಾರ, ವಿಹಾರವನ್ನು ತ್ಯಜಿಸಿದ್ದೇನೆ. ಸಹಕಾರ ಕ್ಷೇತ್ರದ ಬಗ್ಗೆ ಇದ್ದ ಬದ್ದತೆ ಅದು. ವ್ಯಕ್ತಿಯ ಬದುಕಿನಲ್ಲಿ ಬದ್ಧತೆ ಮುಖ್ಯ ಎಂದು ಅವರು ಹೇಳಿದರು.

ನಾನು ಸಹಕಾರ ಕ್ಷೇತ್ರಕ್ಕೆ ಬರಲು ತಂದೆ ಪ್ರೇರಣೆ, 50 ವರ್ಷಗಳ ಹಿಂದೆ ಅವರು ಖಂಬದಕೋಣೆ ರೈತರ ಸೇವಾಸಹಕಾರಿ ಸಂಘದ ಅಧ್ಯಕ್ಷರಾಗಿದ್ದರು. 26 ವರ್ಷಕ್ಕೆ ನಾನು ಸಹಕಾರ ಕ್ಷೇತ್ರ ಪ್ರವೇಶ ಮಾಡಿದೆ. ಆಗ ಕಷ್ಟಗಳಿದ್ದವು, ಸವಾಲುಗಳಿದ್ದವು. ಎಲ್ಲವನ್ನು ತಾಳ್ಮೆಯಿಂದ ಎದುರಿಸಿದ್ದೇನೆ. ಸಹಕಾರ ಕ್ಷೇತ್ರದಲ್ಲ್ಲಿ ಕೆಲವೊಂದು ಕಾಯ್ದೆಗಳು ಈಗಲೂ ಭಯಗೊಳಿಸುತ್ತವೆ. ಸಾಕಷ್ಟು ಪೈಪೋಟಿಯ ವಾತಾವರಣವನ್ನು ಎದುರಿಸುತ್ತಿದ್ದೇವೆ. ಕೇವಲ ಸಾಲ ಕೊಡುವುದು, ವಸೂಲಾತಿ ಮಾಡುವುದಷ್ಟೇ ಸಹಕಾರ ಸಂಘಗಳ ತತ್ವ ಆಗಿರದೆ ಸೇವೆ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಬೇಕಾಗಿದೆ. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಮಹತ್ವಕಾಂಕ್ಷೆಯ ಯೋಜನೆಯಾದ ಬಹುಕೋಟಿ ವೆಚ್ಚದ ಅಗ್ರಿ ಮಾಲ್ ನಿರ್ಮಾಣ ಹಂತದಲ್ಲಿದೆ. ಸಹಕಾರ ಕ್ಷೇತ್ರದಲ್ಲಿ ಸರಿಯಾದ ನಾಯಕತ್ವ ಇದ್ದರೆ ಖಂಡಿತಾ ಯಶಸ್ಸು ಸಾಧ್ಯ, ಸಹಕಾರಿಗಳು ಸಶಕ್ತರಾಗಬೇಕು ಎಂದು ಎಸ್.ಪ್ರಕಾಶ್ಚಂದ್ರ ಶೆಟ್ಟಿ ಸನ್ಮಾನಕ್ಕೆ ಪ್ರತ್ತುತ್ತರ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕೊಲ್ಲೂರು ಶ್ರೀ ಮೂಕಾಂಭಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಾಬು ಶೆಟ್ಟಿ, ನಿಜವಾದ ಸಮಾಜ ಸೇವೆಯ ಗುಣಗಳನ್ನು ಮೈಗೂಡಿಸಿಕೊಂಡು ಬಂದ ಪ್ರಕಾಶ್ಚಂದ್ರ ಶೆಟ್ಟಿಯವರು ಇವತ್ತು ಸಹಕಾರ, ಕೃಷಿ, ಹೈನುಗಾರಿಕೆ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಿದ್ದಾರೆ. ಅದರ ಹಿಂದೆ ಅವರ ಬದ್ದತೆ ಮತ್ತು ಇಚ್ಛಾಶಕ್ತಿ ಇದೆ. ಅವರು ಸಹಕಾರ ಕ್ಷೇತ್ರದಲ್ಲಿ ಮಾಡುತ್ತಿರುವ ಸಾಧನೆಗಳು ಮಾದರಿಯಾಗಿದೆ ಎಂದರು.

ಕೃಷಿ ಪತ್ತಿನ ಸಹಕಾರ ಸಂಘಗಳ ಪರವಾಗಿ ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಕೆದೂರು ಸದಾನಂದ ಶೆಟ್ಟಿ ಹಾಗೂ ವಂಡ್ಸೆ ವ್ಯವಸಾಯಿಕ ಸಹಕಾರಿ ಸಂಘದ ಅಧ್ಯಕ್ಷ ಎನ್.ಮಂಜಯ್ಯ ಶೆಟ್ಟಿ ಮಾತನಾಡಿದರು.

ಈ ಸಂದರ್ಭದಲ್ಲಿ ಭೂ ಅಭಿವೃದ್ದಿ ಬ್ಯಾಂಕ್ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಟಿ ನಾರಾಯಣ ಹೆಗ್ಡೆ, ಕುಂದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಕೃಷ್ಣಮೂರ್ತಿ, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಗದೀಶ ಪೂಜಾರಿ, ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಶೀನ ಪೂಜಾರಿ, ಹೆಮ್ಮಾಡಿ ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ ಕುಮಾರ್ ಶೆಟ್ಟಿ, ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಜಯರಾಮ ಶೆಟ್ಟಿ, ಗಂಗೊಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಆನಂದ ಬಿಲ್ಲವ, ಕೊಲ್ಲೂರು ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರ ಅಡಿಗ, ಕಾವ್ರಾಡಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಸದಾನಂದ ಬಳ್ಕೂರು, ಜಡ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ, ಮುದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ವಿಜಯ ಶಾಸ್ತ್ರೀ, ಕರ್ಕುಂಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಬಾಂಡ್ಯ ಸುಧಾಕರ ಶೆಟ್ಟಿ, ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಹೆಚ್.ಮಂಜಯ್ಯ ಶೆಟ್ಟಿ, ಅಂಪಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರದೀಪ ಕುಮಾರ್ ಶೆಟ್ಟಿ ಗುಡಿಬೆಟ್ಟು,ಉಳ್ಳೂರು ಮಚ್ಚಟ್ಟು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜೇಶ ಹೆಬ್ಬಾರ್, ಮಾನಂಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರದೀಪ ಯಡಿಯಾಳ, ಅಮಾಸೆಬೈಲು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಸದಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಎಸ್.ಪ್ರಕಾಶ್ಚಂದ್ರ ಶೆಟ್ಟಿ ಹಾಗೂ ಅವರ ಪತ್ನಿ ಗೀತಾ ಶೆಟ್ಟಿಯವರನ್ನು ಅದ್ದೂರಿಯಾಗಿ ಸನ್ಮಾನಿಸಲಾಯಿತು. ನೂರಾರು ಸಹಕಾರಿಗಳು, ಸಹಕಾರಿ ನೌಕರರನ್ನು ಪ್ರಕಾಶ್ಚಂದ್ರ ಶೆಟ್ಟಿ ಅವರನ್ನು ಅಭಿನಂದಿಸಿದರು.

ಕುಂದಾಪುರ ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರಸಿಂಹ ಹೊಳ್ಳ, ಮಾನಂಜೆ ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ನಾಯ್ಕ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಷ್ಣು ಪೈ, ಉಳ್ಳೂರು-ಮಚ್ಚಟ್ಟು ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಆಚಾರ್, ಕರ್ಕುಂಜೆ ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಭಾಸ್ ಶೆಟ್ಟಿ, ಕಾವ್ರಾಡಿ ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯರಾಮ ಹೆಗ್ಡೆ, ಕೊಲ್ಲೂರು ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣೇಶ ಶ್ಯಾನುಭಾಗ್, ಬಸ್ರೂರು ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಬಿತಾ, ಪಂಚಗಂಗಾ ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ ಪೂಜಾರಿ, ಬೈಂದೂರು ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಾಪ್ ಬೈಂದೂರು, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ, ಅಮಾಸೆಬೈಲು ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣಕುಮಾರ್ ಭಾಗವತ್, ಮುದೂರು ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಪೂಜಾರಿ, ಅಂಪಾರು ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ, ಪಡುಕೋಣೆ ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ, ಶಂಕರನಾರಾಯಣ ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೀಶ್ ಕಾಂಚನ್, ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾರ್ವತಿ, ವಂಡ್ಸೆ ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಮತಿ ಶೆಟ್ಟಿ, ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವರಾಮ ಪೂಜಾರಿ, ಜಡ್ಜಲ್ ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೋಭನಾ, ಸಿದ್ಧಾಪುರ ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಕೇಶ್ ಅತಿಥಿಗಳನ್ನು ಗೌರವಿಸಿದರು.

ಅವಿಭಜಿತ ಕುಂದಾಪುರ ತಾಲೂಕಿನ ಕೃಷಿಪತ್ತಿನ ಸಹಕಾರಿ ಸಂಘಗಳ ನೌಕರರ ಒಕ್ಕೂಟದ ಅಧ್ಯಕ್ಷ ವಿಶ್ವೇಶ್ವರ ಐತಾಳ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಕೀರ್ತಿಕುಮಾರ್ ಶೆಟ್ಟಿ ವಂದಿಸಿದರು. ಆಕಾಶವಾಣಿ ಕಲಾವಿದ ಡಾ.ಗಣೇಶ ಗಂಗೊಳ್ಳಿ ಪ್ರಾರ್ಥನೆ, ಸೋಬಾನೆ ಹಾಡು ಹಾಡಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು.

 

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!