spot_img
Thursday, April 2, 2026
spot_img

ಹಿರಿಯ ಬಣ್ಣದ ವೇಷಧಾರಿ ಸದಾಶಿವ ಶೆಟ್ಟಿಗಾರ್ ಸಿದ್ಧಕಟ್ಟೆ ನಿಧನ

kundapura: ತೆಂಕುತಿಟ್ಟಿನ ಹಿರಿಯ ಬಣ್ಣದ ವೇಷಧಾರಿ, ಸುರ್ದೀರ್ಘ 41 ವರ್ಷಗಳ ಕಲಾಸೇವೆ ಮಾಡಿದ ಜನಪ್ರಿಯ ಬಣ್ಣದ ವೇಷದ ಕಲಾವಿದ ಸದಾಶಿವ ಶೆಟ್ಟಿಗಾರ್ ಸಿದ್ಧಕಟ್ಟೆ ಇಂದು (ಜು.20) ನಿಧನರಾದರು. ಅವರಿಗೆ 60 ವರ್ಷ ವಯಸ್ಸಾಗಿತ್ತು.

ಡಿಸೆಂಬರ್ 17-1965 ರಂದು ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದ ಸಿದ್ಧಕಟ್ಟೆಯಲ್ಲಿ ಬಾಬು ಶೆಟ್ಟಿಗಾರ್,ಶ್ರೀಮತಿ ಗಿರಿಯಮ್ಮ ದಂಪತಿಗಳ ಪುತ್ರರಾಗಿ ಜನಿಸಿದರು.ಸಿದ್ಧಕಟ್ಟೆ ಸೈಂಟ್ ಮೆಟ್ರಿಕ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ. 6ನೇ ತರಗತಿಯ ವರೆಗೆ ವಿದ್ಯಾಭ್ಯಾಸ ಮಾಡಿದ್ದರು. ಗುರುಗಳಾದ ರೆಂಜಾಳ ರಾಮಕೃಷ್ಣ ರಾವ್ , ಬಣ್ಣದ ಮಹಾಲಿಂಗ ಇವರಿಂದ ಯಕ್ಷಶಿಕ್ಷಣ ಪಡೆದು ಕಟೀಲು, ಧರ್ಮಸ್ಥಳ, ಹೊಸನಗರ, ಎಡನೀರು ಮತ್ತು ಹನುಮಗಿರಿ ಮೇಳಗಳಲ್ಲಿ ಸೇವೆ ಸಲ್ಲಿಸಿದರು. ಹನುಮಗಿರಿ ಮೇಳದಲ್ಲಿ 2025ರ ತಿರುಗಾಟವನ್ನು ಕಾಡುವ ಅನಾರೋಗ್ಯದ ನಡುವೆಯೂ ಪೂರೈಸಿ ನಿವೃತ್ತರಾಗಿದ್ದರು.

ಅವರಿಗೆ ಪೇಜಾವರ ಶ್ರೀಗಳ ಜನುಮದಿನದ ಶ್ರೀರಾಮ ವಿಠಲ ಪ್ರಶಸ್ತಿ, ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ, ಕೀಲಾರು ಗೋಪಾಲಕೃಷ್ಣಯ್ಯ ಪ್ರಶಸ್ತಿ, ಅರಸಂಕಲ ಪ್ರಶಸ್ತಿಗಳನ್ನು ಪಡೆದುದಲ್ಲದೆ ಹರೇಕಳ ಪಾವೂರು, ಬಿ. ಸಿ. ರೋಡಿನಲ್ಲಿ ಅಲ್ಲದೆ ಇನ್ನೂ ಅನೇಕ ಸಂಘ-ಸಂಸ್ಥೆಗಳು ಸನ್ಮಾನಿಸಿ ಗೌರವಿಸಿವೆ.

ಅವರು ಪತ್ನಿ ಮತ್ತು ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!