spot_img
Monday, February 16, 2026
spot_img

ಬೀಜಾಡಿ ಮೀನುಗಾರರ ಸಹಕಾರಿ ಸಂಘದ ನೂತನ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ ಅವರಿಗೆ ಅದ್ದೂರಿಯ ಅಭಿನಂದನಾ ಕಾರ್ಯಕ್ರಮ

ಜನಪ್ರತಿನಿಧಿ ವಾರ್ತೆ] ಕುಂದಾಪುರ: ಯೋಚನೆಗಳು ಜ್ಯಾರಿಗೆ ಬಂದು ಅವು ತಲುಪಬೇಕಾದವನ್ನು ತಲುಪಿದಾಗ ಸಾರ್ಥಕತೆ ಬರುತ್ತದೆ. ಗಳಿಸಿದ ಸ್ಥಾನ, ಕೆಲಸ ಮಾಡುವ ಮೂಲಕ ಅಂತಸ್ತು ಬೆಳೆಯುತ್ತದೆ. ಜನರು ನೀಡಿದ ಅವಕಾಶವನ್ನು ಸಮರ್ಥವಾಗಿ ನಿರ್ವಹಿಸಿ, ಸದಾ ನೆನಪಿನಲ್ಲಿ ಉಳಿಯುವಂತೆ ಮಾಡಬೇಕು ಎಂದು ಮಾಜಿ ಸಂಸದ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಹೇಳಿದರು.

ಟೀಂ ಅಶೋಕ್ ಪೂಜಾರಿ ಸ್ನೇಹಿತ ಬಳಗ ಬೀಜಾಡಿ-ಗೋಪಾಡಿ ವತಿಯಿಂದ ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಬೀಜಾಡಿ ಮೀನುಗಾರರ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಆವಿರೋಧವಾಗಿ ಆಯ್ಕೆಯಾದ ಅಶೋಕ್ ಪೂಜಾರಿ ಬೀಜಾಡಿ ಅವರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಮೀನುಗಾರರ ಸಹಕಾರ ಸಂಘಗಳ ಮೂಲಕ ಮೀನುಗಾರರ ಅವಶ್ಯಕತೆಗಳನ್ನು ಸರಕಾರದ ಮೇಲೆ ಒತ್ತಡ ತಂದು ಮಾಡಿಸಿಕೊಳ್ಳಬೇಕು. ಈಗ ಸರಕಾರವೂ ಇರುವುದರಿಂದ ಅಶೋಕ ಪೂಜಾರಿಯವರು ಸಂಘಕ್ಕೆ ಸರಕಾರದಿಂದ ದೊರಕುವ ಸೌಲಭ್ಯಗಳನ್ನು ತರಿಸಿಕೊಳ್ಳಲು ಸಾಧ್ಯತೆ ಇದೆ ಎಂದರು.

ಅಭಿನಂದಿಸಿ ಮಾತನಾಡಿದ ಗೋಪಾಡಿ ಬ್ರಹ್ಮಲಿಂಗೇಶ್ವರ ಚಿಕ್ಕು ಅಮ್ಮನವರ ದೇವಸ್ಥಾನದ ಆಡಳಿತ ಮೊಕ್ತೇಸರ ಆನಂದ ಬಿಳಿಯ ಅವರು, ಸೇವಾ ಮನೋಭಾವನೆಯನ್ನು ಹೊಂದಿರುವ ಅಶೋಕ್ ಪೂಜಾರಿಯವರು ಎಲ್ಲರೊಳು ಒಂದಾಗಿ ಇರುವ ವ್ಯಕ್ತಿ. ಬೇರೆ ಬೇರೆ ಕ್ಷೇತ್ರಗಳಲ್ಲಿ ಸೇವೆಯ ಛಾಪು ಮೂಡಿಸಿದ್ದಾರೆ. ಉತ್ತಮ ನಾಯಕತ್ವ ಹೊಂದಿದ್ದಾರೆ. ಇವರ ನೇತೃತ್ವದಲ್ಲಿ ಬೀಜಾಡಿ ಮೀನುಗಾರರ ಸಹಕಾರ ಸಂಘ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದರು.

ಅಭಿನಂದನೆಯನ್ನು ಸ್ವೀಕರಿಸಿ ಪ್ರತ್ಯುತ್ತರಿಸಿದ ಬೀಜಾಡಿ ಮೀನುಗಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಅಶೋಕ್ ಪೂಜಾರಿ ಬೀಜಾಡಿ ಅವರು, ಸಹಕಾರ ಕ್ಷೇತ್ರದಲ್ಲಿ ಸದಸ್ಯರ ಪರವಾಗಿ ಕೆಲಸ ಮಾಡುವುದು, ಸೌಲಭ್ಯಗಳನ್ನು ತಲುಪಿಸುವಲ್ಲಿ ಹಿಂದಿನಿಂದಲೂ ಶ್ರಮಿಸುತ್ತಾ ಬಂದಿದ್ದೇನೆ. ನಿಮ್ಮೆಲ್ಲರ ಅಭಿಮಾನ, ಪ್ರೀತಿಗೆ ನಾನು ಸದಾ ಋಣಿಯಾಗಿರುತ್ತೇನೆ. ಇನ್ನೂ ಹೆಚ್ಚಿನ ಸೇವೆಯನ್ನು ನೀಡಲು ಪ್ರಯತ್ನಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ‌ಎಫ್‌ಡಿಸಿ ಮಾಜಿ ಅಧ್ಯಕ್ಷ ಹಿರಿಯಣ್ಣ ಚಾತ್ರಬೆಟ್ಟು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿರ್ದೇಶಕರಾದ ಎಂ.ಮಹೇಶ್ ಹೆಗ್ಡೆ, ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಶಿವರಾಮ ಶೆಟ್ಟಿ ಮಲ್ಯಾಡಿ, ಕೋಟೇಶ್ವರ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಕೆದೂರು ಸದಾನಂದ ಶೆಟ್ಟಿ, ಬೈಂದೂರು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಮೋಹನ ಪೂಜಾರಿ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುರೇಂದ್ರ ಶೆಟ್ಟಿ, ಬೀಜಾಡಿ ಮೀನುಗಾರರ ಸೇವಾ ಸಹಕಾರ ಸಂಘದ ಉಪಾಧ್ಯಕ್ಷ ರಾಜು ತೋಟದಬೆಟ್ಟು ಉಪಸ್ಥಿತರಿದ್ದರು.

ಟೀಂ ಅಶೋಕ್ ಪೂಜಾರಿ ಸ್ನೇಹಿತ ಬಳಗ ಬೀಜಾಡಿ-ಗೋಪಾಡಿ ವತಿಯಿಂದ ಅಶೋಕ್ ಪೂಜಾರಿ ಬೀಜಾಡಿ ಹಾಗೂ ಆಶಾ ಅಶೋಕ್ ಪೂಜಾರಿ ಅವರನ್ನು ಅದ್ದೂರಿಯಾಗಿ ಸನ್ಮಾನಿಸಲಾಯಿತು.

ಗಾಯಕ ರಾಘವೇಂದ್ರ ಕೋಟೇಶ್ವರ ಪ್ರಾರ್ಥನೆ ಮಾಡಿದರು. ದಿನೇಶ ಚಾತ್ರಬೆಟ್ಟು ಸ್ವಾಗತಿಸಿದರು. ರಾಜಶೇಖರ ಶೆಟ್ಟಿ ಕೊರ್ಗಿ ಸನ್ಮಾನ ಪತ್ರ ವಾಚಿಸಿದರು. ಪತ್ರಕರ್ತ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!