spot_img
Thursday, April 2, 2026
spot_img

ಸಿರಿಬಾಗಿಲಿನಲ್ಲಿ ತೆಂಕುತಿಟ್ಟು ಯಕ್ಷಗಾನದ ಹಿಮ್ಮೇಳ ಕಲಾವಿದರ ಶಿಬಿರ

ಕಾಸರಗೋಡು: ಸಾಂಸ್ಕೃತಿಕ ಕ್ಷೇತ್ರದ ಅಧ್ಯಯನ ಯೋಗ್ಯ ಚಟುವಟಿಕೆಗಳಿಗೆ ಪ್ರಧಾನವನಿಸಿದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ ಜುಲೈ 27ರಂದು ಆದಿತ್ಯವಾರ ತೆಂಕುತಿಟ್ಟಿನ ಯಕ್ಷಗಾನ ಹಿಮ್ಮೇಳ ಕಲಾವಿದರಿಗೆ ವಿಶೇಷ ಶಿಬಿರ ಜರಗಲಿದೆ.

ಈ ಶಿಬಿರವನ್ನು ತೆಂಕುತಿಟ್ಟು ಯಕ್ಷಗಾನದ ಹಿಮ್ಮೇಳ ಗುರುಗಳಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್, ಹರಿನಾರಾಯಣ ಬೈಪಡಿತಾಯ ಹಾಗೂ ಪದ್ಯಾಣ ಶಂಕರನಾರಾಯಣ ಭಟ್ ಉದ್ಘಾಟಿಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಟಿ. ಶ್ಯಾಮ ಭಟ್ ಅವರು ಭಾಗವಹಿಸಲಿದ್ದಾರೆ. ತೆಂಕುತಿಟ್ಟು ಯಕ್ಷಗಾನದ ಐವತ್ತಕ್ಕೂ ಹೆಚ್ಚು ವೃತ್ತಿಪರ ಹವ್ಯಾಸಿ, ಹೆಮ್ಮೇಳದ ಕಲಾವಿದರು ಭಾಗವಹಿಸಲಿದ್ದಾರೆ. ಈ ಶಿಬಿರದ ಜೊತೆ ಶ್ರೀ ಸತ್ಯಸಾಯಿ ಸೇವಾ ಸಮಿತಿ ಪೆರ್ಲ ಇವರ ಸಹಭಾಗಿತ್ವದಲ್ಲಿ ಡಾ. ಕೃಷ್ಣ ಮೋಹನ ಪೆರ್ಲ ಮತ್ತು ಡಾ. ಸತ್ಯನಾರಾಯಣ ಇವರ ಮಾರ್ಗದರ್ಶನದಲ್ಲಿ ಕಲಾವಿದರಿಗೆ ಹಾಗೂ ನಾಗರಿಕರಿಗೆ ಉಚಿತ ಆಯುರ್ವೇದ ವೈದ್ಯಕೀಯ ಶಿಬಿರವು ನಡೆಯಲಿರುತ್ತದೆ .ಇದರ ಪ್ರಯೋಜನವನ್ನು ಕಲಾವಿದರು ನಾಗರಿಕರು ಪಡೆದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಿರಿಬಾಗಿಲು ಪ್ರತಿಷ್ಠಾನವು ಪ್ರಕಟಣೆ ಮೂಲಕ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!