spot_img
Thursday, April 2, 2026
spot_img

ಏಕ ವಿನ್ಯಾಸ ನಕ್ಷೆಯ ಅವ್ಯವಸ್ಥೆಯ ವಿರುದ್ಧ ಧರಣಿ: ಕುಂದಾಪುರದಲ್ಲಿ ಪೂರ್ವಭಾವಿ ಸಭೆ

ಕುಂದಾಪುರ: ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲದ ಕಾರ್ಯಾಲಯದಲ್ಲಿ ಏಕ ವಿನ್ಯಾಸ ನಕ್ಷೆಯ ಅವ್ಯವಸ್ಥೆಯ ವಿರುದ್ಧ ಧರಣಿಯ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು.

ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿ, ಜುಲೈ ೨೮ರಂದು ಜಿಲ್ಲಾ ಮಟ್ಟದ ಬ್ರಹತ್ ಪ್ರತಿಭಟನಾ ಮೆರವಣಿಗೆ ನಡೆಯಲ್ಲಿದ್ದು. ಜಿಲ್ಲೆಯಲ್ಲಿ ಕಾಡುತ್ತಿರುವ ಜ್ವಲಂತ ಸಮಸ್ಯೆಗಳ ಕುರಿತು ಹೋರಾಟ ಮಾಡುವ ಮೂಲಕ ನಿದ್ದೆಯ ಮಂಪರಿನಲ್ಲಿರುವ ಕಾಂಗ್ರೆಸ್ ಸರಕಾರದ ಕಣ್ಣು ತೆರೆಸುವ ಕೆಲಸ ಆಗಬೇಕಾಗಿದ್ದು, ನಮುನೆ ೯/೧೧ ಇದರ ಅಧಿಕಾರ ಈ ಹಿಂದೆ ಇದ್ದಂತೆ ಗ್ರಾಮ ಪಂಚಾಯತ್ ವ್ಯಾಪ್ತಿಗೆ ನೀಡುವ ಮೂಲಕ ಬ್ರಹ್ಮಾಂಡ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಪಕ್ಷದ ಎಲ್ಲ ಪದಾಧಿಕಾರಿಗಳು ಅಣಿಯಾಗ ಬೇಕು ಎಂದು ಹೇಳಿದರು.

ಸಭೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಅವರು ಮಾತನಾಡಿ, ಅಮೂಲ್ಯ ಸಲಹೆ ಸೂಚನೆ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ಇದರ ಏಕ ವಿನ್ಯಾಸ ನಕ್ಷೆಯ ಸಮಸ್ತ ನಾಗರಿಕರು ಕೂಡ ಭಾಗವಹಿಸಿ ಪ್ರತಿಭಟನಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದರು.

ಸಭೆಯ ಅಧ್ಯಕ್ಷತೆಯನ್ನು ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ವಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಗಿರೀಶ್ ಅಂಚನ್, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ಶೆಣೈ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಉಪಸ್ಥಿತರಿದ್ದರು.

ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಕುಂದಾಪುರ ಮಂಡಲದ ಪದಾಧಿಕಾರಿಗಳು, ಹಾಗೂ ಮಂಡಲದ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!