spot_img
Thursday, April 2, 2026
spot_img

ಬಿದ್ಕಲ್‌ಕಟ್ಟೆಯಲ್ಲಿ ರಾತ್ರಿ ಮಲಗಿದ್ದ ಗೋ ಕಳವು: ಕುಖ್ಯಾತ ಗೋ ಕಳ್ಳರ ಬಂಧನ

ಕುಂದಾಪುರ: ಜು.19ರ ಬೆಳಗಿನ ಜಾವ ಬಿದ್ಕಲ್ಕಟ್ಟೆ ಪೇಟೆಯ ಬಳಿ ರಸ್ತೆ ಬದಿಯಲ್ಲಿ ಮಲಗಿದ್ದ ಒಂದು ಹಸುವನ್ನು ಹಿಡಿದು ಅದಕ್ಕೆ ಬಳ್ಳಿಯಿಂದ ಕುತ್ತಿಗೆಗೆ ಬಿಗಿದು ಅದನ್ನು ಹಿಂಸಾತ್ಮಕವಾಗಿ ಎಳೆದು ವಾಹನಕ್ಕೆ ತುಂಬಿಸಿ ಕಳವು ಮಾಡಿಕೊಂಡು ಹೋದ ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿತರಾದ ಇಮ್ರಾನ್ @ ಕುಟ್ಟು ಹಾಗೂ ಇರ್ಷಾದ್ ರನ್ನು ದಸ್ತಗಿರಿ ಮಾಡಲಾಗಿದೆ.

ಈ ಪ್ರಕರಣದ ಪತ್ತೆ ಕಾರ್ಯವನ್ನು ಕೈಗೊಂಡ ಬ್ರಹ್ಮಾವರ ವೃತ್ತ ನಿರೀಕ್ಷಕರಾದ ಗೋಪಿಕೃಷ್ಣ ನೇತೃತ್ವದಲ್ಲಿ ಕೋಟಾ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಘವೇಂದ್ರ ಸಿ ಮತ್ತು ಸಿಬ್ಬಂದಿಯವರಾದ ಶ್ರೀಧರ್, ರಾಘವೇಂದ್ರ ಅವರನ್ನೊಳಗೊಂಡ ತಂಡ ಕಳ್ಳತನ ಮಾಡಿದ ಆರೋಪಿತರಾದ ಇಮ್ರಾನ್ @ ಕುಟ್ಟು ಹಾಗೂ ಇರ್ಷಾದ್ ರವರನ್ನು ದಸ್ತಗಿರಿ ಮಾಡಿ ಕೃತ್ಯಕ್ಕೆ ಬಳಸಿದ ಕೆ‌ಎ 12 ಎನ್ 5122 ನಂಬರಿನ ಮಹೇಂದ್ರ ಸ್ಕಾರ್ಪಿಯೋ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಪ್ರಕರಣದಲ್ಲಿ ದಸ್ತಗಿರಿಯಾಗಿರುವ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕು ಪುದು ಗ್ರಾಮದ ಇಮ್ರಾನ್ @ ಕುಟ್ಟು (31) ಈತನ ಮೇಲೆ ಉಡುಪಿ ಜಿಲ್ಲೆಯ ಈ ಪ್ರಕರಣವನ್ನು ಸೇರಿದಂತೆ, ದಕ್ಷಿಣ ಕನ್ನಡ, ಕೊಡಗು, ಹಾಸನ ಜಿಲ್ಲೆ ಹಾಗೂ ಮಂಗಳೂರು ನಗರದಲ್ಲಿ ಒಟ್ಟು ೩೫ ಪ್ರಕರಣಗಳು ದಾಖಲಾಗಿದೆ.

ಇನ್ನೋರ್ವ ಆರೋಪಿ ದ.ಕ ಜಿಲ್ಲೆಯ ಮಂಗಳೂರು ತಾಲೂಕು ಗಂಜಿಮಠ ಅಜದ್ ನಗರದ ನಿವಾಸಿ ಇರ್ಷಾದ್ (30), ಈತನ ಮೇಲೆ ಉಡುಪಿ ಜಿಲ್ಲೆಯ ಈ ಪ್ರಕರಣವನ್ನು ಸೇರಿದಂತೆ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆ ಹಾಗೂ ಮಂಗಳೂರು ನಗರದಲ್ಲಿ ಒಟ್ಟು ೧೪ ಪ್ರಕರಣಗಳು ದಾಖಲಾಗಿದೆ.

 

 

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!