spot_img
Thursday, April 2, 2026
spot_img

ಅಮೇರಿಕಾದ ಶೃಂಗಸಭೆಗೆ ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು: ಕರ್ನಾಟಕ ವಿಧಾನಸಭೆಗೆ ಮೊದಲ ಬಾರಿಗೆ ಆಯ್ಕೆಯಾಗಿರುವ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ವಿಧಾನಸಭಾ ಸಮಿತಿಯ ಮೂಲಕ ಅಮೇರಿಕಾದ ಬೋಸ್ಟನ್‌ಗೆ ಅಧ್ಯಯನ ಪ್ರವಾಸದ ಅವಕಾಶ ಪಡೆದಿದ್ದಾರೆ.

ರಾಜ್ಯ ಶಾಸಕರ ರಾಷ್ಟ್ರೀಯ ಸಮಾವೇಶ ಹಾಗೂ ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಗಳ ಆಶ್ರಯದಲ್ಲಿ ಅಮೇರಿಕಾದ ಬೋಸ್ಟನ್ ನಗರದಲ್ಲಿ ಶಾಸಕಾಂಗ ಶೃಂಗಸಭೆ ೨೦೨೫ ನಡೆಯಲಿದ್ದು, ಈ ಶೃಂಗಸಭೆಯಲ್ಲಿ ಭಾರತದ ಸಂಸದರು, ವಿವಿಧ ರಾಜ್ಯಗಳ ವಿಧಾನ ಸಭೆ ಹಾಗೂ ವಿಧಾನ ಪರಿಷತ್ತಿನ ಸದಸ್ಯರು, ಸಚಿವರುಗಳು, ರಾಜಕೀಯ ತಜ್ಞರು, ನೀತಿ ನಿರೂಪಕರು, ರಾಜಕೀಯ ಮುತ್ಸದ್ದಿಗಳು ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಈ ಶೃಂಗಸಭೆಯಲ್ಲಿ ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ, ಶಾಸನ ಸಭೆಗಳ ಪಕ್ಷಾತೀತ ನಿರ್ವಹಣೆ, ಶಾಸನ ಸಭೆಗಳಿಗೆ ಅರ್ಥಿಕ ಸ್ವಾಯತ್ತತೆ ಸೇರಿದಂತೆ ಹತ್ತು ಹಲವು ವಿಷಯಗಳ ಕುರಿತು ಗೋಷ್ಠಿಗಳು, ವಿಚಾರ ಸಂಕಿರಣ, ಸಂವಾದಗಳು ಜರುಗಲಿವೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!