spot_img
Sunday, February 15, 2026
spot_img

ಕುಂದಾಪುರ ವೆಂಕಟರಮಣ ಕಾಲೇಜಿನಲ್ಲಿ ರಸಾಯನ ಶಾಸ್ತ್ರ ಉಪನ್ಯಾಸಕರಿಗೆ ಕಾರ್ಯಾಗಾರ

ಕುಂದಾಪುರ: ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು, ಕುಂದಾಪುರ ಇವರ ಸಹಭಾಗಿತ್ವದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಜುಲೈ 2 ರಂದು ರಸಾಯನ ಶಾಸ್ತ್ರ ಉಪನ್ಯಾಸಕರಿಗೆ 1 ದಿನದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಬರಲ್ ಟ್ರಸ್ಟ್ ಇದರ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉ.ಜಿ.ಪ.ಪೂ.ಕಾ. ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆ ಅಧ್ಯಕ್ಷರಾದ ಮಂಜುನಾಥ್ ಭಟ್ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದAcademics USAMEC, and Training, ಇದರ ನಿರ್ದೆಶಕರಾದ ಡಾ. ಸಿ. ಕೆ. ಮಂಜುನಾಥ್, ವಿದ್ಯಾರ್ಥಿಗಳು ಆಸಕ್ತಿ ಇಲ್ಲದ ಕ್ಷೇತ್ರದಲ್ಲಿ ಮುಂದುವರೆಯುವಂತೆ ಒತ್ತಾಯ ಮಾಡುವುದರಿಂದ ಸಮಾಜದಲ್ಲಿ ಅನೇಕ ದುರಂತ ಗಳು ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ. ಅದಕ್ಕೆ ಅವಕಾಶ ಕೊಡದೇ ಅವರ ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲು ಅನುವು ಮಾಡಿಕೊಡಬೇಕು ಎಂದು ತಿಳಿಸಿದರು.

ಉ.ಜಿ.ಪ.ಪೂ.ಕಾ. ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆ ಗೌರವಾಧ್ಯಕ್ಷ ರಮಾಕಾಂತ್ ರೇವಣ್‌ಕರ್, ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು, ಕುಂದಾಪುರ ಇಲ್ಲಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉ.ಜಿ.ಪ.ಪೂ.ಕಾ. ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆ ಕಾರ್ಯದರ್ಶಿ ಹರಿಪ್ರಸಾದ್, ರಾಜ್ಯ ಪ್ರತಿನಿಧಿ ಕೃಷ್ಣಮೂರ್ತಿ ಉಪಸ್ಥಿತರಿದ್ದರು.

ಉ.ಜಿ.ಪ.ಪೂ.ಕಾ. ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆಯ ರಾಜ್ಯ ಪ್ರತಿನಿಧಿ ಕೃಷ್ಣ ಮೂರ್ತಿ ಸ್ವಾಗತಿಸಿದರು. ವಿದ್ಯೋದಯ ಪದವಿಪೂರ್ವ ಕಾಲೇಜು ಉಡುಪಿ ಇಲ್ಲಿನ ಉಪನ್ಯಾಸಕಿ ರಂಜನಾ ವಂದಿಸಿದರು.  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕಿ ಸ್ಮಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!