spot_img
Saturday, February 14, 2026
spot_img

ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕರ ಕಾರ್ಯಾಗಾರ ಉದ್ಘಾಟನೆ

ಕುಂದಾಪುರ: ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ಸಭಾಂಗಣದಲ್ಲಿ ಉಡುಪಿ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹಿಂದಿ ಕಾರ್ಯಗಾರ ನಡೆಯಿತು.

ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಾರುತಿ ಸಮಾರಂಭವನ್ನು ಉದ್ಘಾಟಿಸಿ, ಉದ್ಘಾಟನಾ ನುಡಿಗಳನ್ನಾಡಿದರು. ಅತಿಥಿಯಾಗಿ ಕುಂದಾಪುರ ರೋಟರಿ ಕ್ಲಬ್ ಅಧ್ಯಕ್ಷರಾದ ನಾಗರಾಜ ಶೆಟ್ಟಿ, ಉಡುಪಿ ಜಿಲ್ಲಾ ಹಿಂದಿ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ನಾರಾಯಣ ನಾಯಕ್ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.

ಸಭಾಧ್ಯಕ್ಷತೆಯನ್ನು ವಹಿಸಿರುವ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಅಧ್ಯಕ್ಷೀಯ ನುಡಿಗಳನ್ನಾಡಿದರು.

ಸಮಾರಂಭದಲ್ಲಿ ಹಿರಿಯ ನಿವೃತ್ತ ಉಪನ್ಯಾಸಕರಾದ ವಸಂತ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಪ್ರಬಂಧ ಮಂಡನೆ ಮಾಡಿರುವ ಡಾ .ಜಿ. ಎಂ. ಗೊಂಡ ಭಂಡಾರ್ ಕಾರ್ಸ್ ಪದವಿಪೂರ್ವ ಕಾಲೇಜು ಕುಂದಾಪುರ, ಶಾಂತರಾಮ ಶೆಟ್ಟಿ ನಿಟ್ಟೆ ಪದವಿ ಪೂರ್ವ ಕಾಲೇಜು, ಹಾಗೂ ಡಾ.ಅನಂತರಾಮ ನಾಯಕ್ ಈ ಮೂವರು ಸಂಪನ್ಮೂಲ ವ್ಯಕ್ತಿಗಳನ್ನು ಸನ್ಮಾನಿಸಲಾಯಿತು. ಭಂಡಾರ್ಕಾರ್ಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.  ಸುಖಿತ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಸಂಘದ ಕಾರ್ಯದರ್ಶಿ  ಮದನ್ ಲಾಲ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!