spot_img
Tuesday, March 31, 2026
spot_img

ಕೋಟ: ಧಾರಾಕಾರ ಮಳೆಗೆ ಮನೆ ಕುಸಿತ ಸ್ಥಳಕ್ಕೆ ಶಾಸಕ ಎ.ಕಿರಣ್ ಕೊಡ್ಗಿ ಭೇಟಿ

ಕೋಟ: ಕಳೆದ ರಾತ್ರಿಯಿಂದ ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ಕೋಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಿಳಿಯಾರಿನ ಹರ್ತಟ್ಟು ನಿವಾಸಿ ಸೀತಾರಾಮ್ ದೇವಾಡಿಗ ಅವರ ಮನೆ ಕುಸಿದು ಸಂಪೂರ್ಣ ನೆಲಸಮವಾಗಿದ್ದು ಸ್ಥಳಕ್ಕೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಭೇಟಿ ನೀಡಿದರು.

ಮನೆ ಕುಸಿತದಿಂದ ಮನೆಯಲ್ಲಿ ಇದ್ದ ವಸ್ತುಗಳು ಸಂಪೂರ್ಣ ಹಾನಿಯಾಗಿದ್ದು ಅದೃಷ್ಟವಶಾತ್ ಮನೆಯವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಳೆಯ ಅವಘಡದಿಂದ ಮನೆ ಕಳೆದುಕೊಂಡ ಸೀತಾರಾಮ ದೇವಾಡಿಗರವರ ಕುಟುಂಬ ಬೀದಿಗೆ ಬಂದಂತಾಗಿದ್ದು. ಶಾಸಕರು ಬ್ರಹ್ಮಾವರ ತಹಶೀಲ್ದಾರರಾದ ಶ್ರೀಕಾಂತ ಹೆಗ್ಡೆ ಇವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಪ್ರಕೃತಿ ವಿಕೋಪದಡಿ ತುರ್ತು ಪರಿಹಾರ ನೀಡುವ ಬಗ್ಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಕೋಟ ಗ್ರಾಮಲೆಕ್ಕಾಧಿಕಾರಿ ಚೆಲುವರಾಜ್, ಗ್ರಾ.ಪಂ. ಸದಸ್ಯ ಅಜಿತ್ ದೇವಾಡಿಗ, ಉಪಾಧ್ಯಕ್ಷ ಪಾಂಡು ಪೂಜಾರಿ, ಮತ್ತು ಪ್ರೇಮ ಹರೀಶ ದೇವಾಡಿಗ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!