spot_img
Wednesday, April 1, 2026
spot_img

ಸಮೂಹ ಕಾರ್ಯವು ಜೀವನದ ಯಶಸ್ವಿಗೆ ಅತ್ಯವಶ್ಯಕ-ಜೈಕಿಶನ್ ಭಟ್

ಕುಂದಾಪುರ: ತಂಡ ಭಾವನೆಯ ಮಹತ್ವವನ್ನು ವಿವರಿಸುತ್ತಾ, ಉತ್ತಮ ಸಂವಹನ, ಪರಸ್ಪರ ಗೌರವ ಮತ್ತು ಸಹಕಾರವೇ ಯಶಸ್ವಿ ತಂಡದ ಮೂಲ ಅಂಶಗಳೆಂದು ಖ್ಯಾತ ತರಬೇತುದಾರರಾದ ಜೈಕಿಶನ್ ಭಟ್ ಹೇಳಿದರು.

ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಐಕ್ಯೂ‌ಎಸಿ ಘಟಕ ಹಮ್ಮಿಕೊಂಡ ‘ಪ್ರೇರಣಾ’ ಶಿಬಿರದಲ್ಲಿ ‘ಸಮೂಹ ಕೆಲಸ’ ವಿಷಯದ ಕುರಿತು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಐಕ್ಯೂ‌ಎಸಿ ಸಂಯೋಜಕಿ ಹಾಗೂ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ದೀಪಿಕಾ ಜಿ., ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಬೋಧಕ-ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಯೋಜಕರಾದ ಶ್ರೀಮತಿ ವಿನಯ ವಿ. ಶೆಟ್ಟಿ ಅತಿಥಿಗಳನ್ನು ಪರಿಚಯಿಸಿ, ಶ್ರೀಮತಿ ಅವಿತಾ ಕೊರೆಯ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!