spot_img
Wednesday, April 1, 2026
spot_img

ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಪ್ರತಿಭಾ ಪ್ರದರ್ಶನ ‘ನೂಪುರ-2025’

ಕುಂದಾಪುರ: ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಬಸ್ರೂರು ಇಲ್ಲಿ ಪ್ರತಿಭಾ ಪ್ರದರ್ಶನ ‘ನೂಪುರ-2025’ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮವನ್ನು ಶಾರದಾ ಕಾಲೇಜಿನ ವಿಶ್ವಸ್ಥ ಮಂಡಳಿ (ರಿ) ಬಸ್ರೂರು ಇದರ ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ ಕಾರ್ಯಕ್ರಮಕ್ಕೆ ಶುಭಚಾಲನೆ ನೀಡಿ, ಪ್ರತಿಭಾನ್ವೇಷಣೆ ವೇದಿಕೆಯು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪ್ರಮುಖ ಹೆಜ್ಜೆಯಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದೊಂದು ಪ್ರತಿಭೆಯಿದ್ದು, ಕಠಿಣ ಪರಿಶ್ರಮದ ಮೂಲಕ ಅದನ್ನು ವಿಕಸನ ಮಾಡಿಕೊಳ್ಳಬೇಕಾಗಿದೆ ಹಾಗೂ ಗುರುಗಳನ್ನು ಮತ್ತು ಹಿರಿಯರನ್ನು ಗೌರವಿಸುವುದು ವಿದ್ಯಾರ್ಥಿಗಳ ಕರ್ತವ್ಯವಾಗಿದೆ ಎಂದು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ಅಧ್ಯಕ್ಷತೆಯನ್ನು ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾರಾಯಣ ಪೈ ವಹಿಸಿದರು. ಶ್ರೀ ಶಾರದಾ ಕಾಲೇಜು ಪ್ರಾಂಶುಪಾಲೆ ಡಾ. ಚಂದ್ರಾವತಿ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಅಮೂಲ್ಯ, ಪಲ್ಲವಿ, ಪ್ರಿಯಾಂಕ ಪ್ರಾರ್ಥಿಸಿದರು. ಕಾರ್ಯಕ್ರಮ ಸಂಯೋಜಕಿ ಆಶಾ ಸ್ವಾಗತಿಸಿ, ಸರಸ್ವತಿ, ಶಿಕ್ಷಣ ಶಾಸ್ತ್ರ ಉಪನ್ಯಾಸಕಿ ವಂದಿಸಿ , ಹಿಂದಿ ಉಪನ್ಯಾಸಕಿ ಸುಹಾನ ಕಾರ್ಯಕ್ರಮವನ್ನು ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!