spot_img
Thursday, April 2, 2026
spot_img

ಬಿ. ಬಿ. ಹೆಗ್ಡೆ ಕಾಲೇಜು: ಮಾನಸಿಕ ಆರೋಗ್ಯದ ಬಗ್ಗೆ ಸೌಜನ್ಯಾ ಶೆಟ್ಟಿ ಅವರಿಂದ ವಿಶೇಷ ಉಪನ್ಯಾಸ

ಕುಂದಾಪುರ: ಆರೋಗ್ಯದ ಪ್ರಾಮುಖ್ಯತೆ, ದಿನನಿತ್ಯದ ಒತ್ತಡ ನಿರ್ವಹಣೆ, ಆತ್ಮವಿಶ್ವಾಸ ಬೆಳೆಸುವ ಮಾರ್ಗಗಳು ಹಾಗೂ ಯುವಜನತೆಗೆ ಬೇಕಾದ ನಿಷ್ಠೆ ಮತ್ತು ಸಮತೋಲನದ ಬಗ್ಗೆ, ಜೊತೆಗೆ ನಕಾರಾತ್ಮಕ ಚಿಂತನೆಗಳನ್ನು ಹೇಗೆ ತಡೆಗಟ್ಟುವುದು ಮತ್ತು ಜೀವನದಲ್ಲಿ ಪ್ರೇರಣೆಯಿಂದ ಮುಂದೆ ಸಾಗುವ ಬಗೆಯನ್ನು ಉಡುಪಿ ಡಾ. ಎ.ವಿ. ಬಾಳಿಗ ಆಸ್ಪತ್ರೆಯ ಕೌನ್ಸಿಲರ್ ಮತ್ತು ಆಡಳಿತಾಧಿಕಾರಿ ಸೌಜನ್ಯಾ ಶೆಟ್ಟಿ ತಿಳಿಸಿದರು.

ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಐಕ್ಯೂ‌ಎಸಿ ಘಟಕ ಹಮ್ಮಿಕೊಂಡ ‘ಪ್ರೇರಣಾ’  ಶಿಬಿರದಲ್ಲಿ ‘ಮಾನಸಿಕ ಆರೋಗ್ಯ’  ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಐಕ್ಯೂ‌ಎಸಿ ಸಂಯೋಜಕಿ ಹಾಗೂ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ದೀಪಿಕಾ ಜಿ., ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ  ರಕ್ಷಿತ್ ರಾವ್ ಗುಜ್ಜಾಡಿ, ಬೋಧಕ-ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.

ಕಾರ್ಯಕ್ರಮ ಸಂಯೋಜಕರಾದ ದೀಪ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ಪ್ರಣಮ್ ಆರ್. ಬೆಟ್ರಬೆಟ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!