spot_img
Thursday, April 2, 2026
spot_img

ಕೋಟ: ವಾಣಿಜ್ಯ ಮತ್ತು ಕಲಾವಿಭಾಗದ ವಿಶಿಷ್ಟಸಾಧಕರಿಗೆ ಪ್ರತಿಭಾ ಪುರಸ್ಕಾರ

ಕೋಟ: ಕೋಟ ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಸಕ್ತ ೨೪ ಮತ್ತು ೨೫ನೇ ಸಾಲಿನ ಈ ಶೈಕ್ಷಣಿಕ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣದಾದ ನೂರು ವಿದ್ಯಾರ್ಥಿಗಳನ್ನು ಕೋಟ ವಿದ್ಯಾ ಸಂಘ ಮತ್ತು ವಿವೇಕ ವಿದ್ಯಾ ಸಂಸ್ಥೆಗಳ ಆಶ್ರಯದಲ್ಲಿ ಪುರಸ್ಕರಿಸಲಾಯಿತು.

ಕಾಲೇಜಿನ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸುರೇಶ ತುಂಗ, ನಿವೃತ್ತ ಸಹನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು ಇವರು ಆಗಮಿಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿ, ವಿಜ್ಞಾನವಿಷಯವನ್ನು ಓದಿದರೆ ಮಾತ್ರ ಉದ್ಯೋಗವನ್ನು ಪಡೆದು ಜೀವನವನ್ನು ನಿರೂಪಿಸಿಕೊಳ್ಳಲು ಸಾಧ್ಯ ಎಂದು ತಿಳಿಯದೆ ವಿದ್ಯಾರ್ಥಿಗಳು ವಾಣಿಜ್ಯ ಮತ್ತು ಕಲಾ ವಿಷಯಗಳನ್ನು ಆಯ್ಕೆ ಮಾಡಿ ಕೊಂಡು ಪ್ರಯತ್ನದಿಂದ ಅಧ್ಯಯನಶೀಲರಾದರೆ ಬಹಳಷ್ಟು ಅವಕಾಶಗಳು ಇದೆ ಎಂದು ತಿಳಿಸಿದರು. ವಾಣಿಜ್ಯ ಮತ್ತು ಕಲಾ ವಿಷಯ ಗಳನ್ನು ಕೀಳೆಂದು ಭಾವಿಸದೆ, ಸ್ವ ಅಧ್ಯಯನ ನಿರಂತರ ಪರಿಶ್ರಮದಿಂದ ಸಾಮಾನ್ಯ ವಿದ್ಯಾರ್ಥಿಗಳು ಕೂಡ ಉತ್ತುಂಗಕ್ಕೆ ತಲುಪಬಹುದೆಂದು ಎಂದು ದೃಷ್ಟಾಂತದ ಮೂಲಕ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟ ವಿದ್ಯಾಸಂಘದ ಅಧ್ಯಕ್ಷ ಸಿ , ಎ ಪ್ರಭಾಕರ ಮಯ್ಯ ವಹಿಸಿದ್ದರು. ಕಾರ್ಯದರ್ಶಿ ಎಂ ರಾಮದೇವ ಐತಾಳ್ ಪುರಸ್ಕೃತ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಜೊತೆ ಕಾರ್ಯದರ್ಶಿ ಮಂಜುನಾಥ ಉಪಾಧ್ಯ, ಹಿಂದಿನ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸುಧಾಕರ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ೫ನೇ ಸ್ಥಾನ ಪಡೆದು ವಿಶೇಷ ಸಾಧನೆಗೈದ ಬಾಲಕೃಷ್ಣ ಭಟ್ ಇವರನ್ನು ಪೋಷಕರ ಸಮ್ಮುಖದಲ್ಲಿವಿಶೇಷವಾಗಿ ಸನ್ಮಾನಿಸಲಾಯಿತು.

ಪ್ರಾಂಶುಪಾಲರಾದ ಜಗದೀಶ ನಾವಡ ಪರಿಚಯಿಸಿ ಸ್ವಾಗತಿಸಿದರು. ಮುಖ್ಯೋಪಾಧ್ಯಾಯರಾದ ವೆಂಕಟೇಶ ಉಡುಪ, ಪ್ರೀತಿ ರೇಖಾ, ಸಹ ಶಿಕ್ಷಕರಾದ ಪ್ರೇಮಾನಂದ ವೇದಿಕೆಯಲ್ಲಿ ಹಾಜರಿದ್ದರು.

ಉಪನ್ಯಾಸಕಿ ಶೋಭಾ , ಜಯಶ್ರೀ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕ ಸದಾಶಿವ ಹೊಳ್ಳ ವಂದಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!