spot_img
Wednesday, March 25, 2026
spot_img

ಮಣಿಪಾಲ-ಉಡುಪಿ ಜ್ಞಾನಸುಧಾ :ಕಾರ್ಗಿಲ್ ವಿಜಯ ದಿವಸ ಆಚರಣೆ

ಉಡುಪಿ ಜ್ಞಾನಸುಧಾ ಪದವಿ ಪೂರ್ವಕಾಲೇಜು, ನಾಗಬನ ಕ್ಯಾಂಪಸ್ ಹಾಗೂ ಮಣಿಪಾಲ್ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ವಿದ್ಯಾನಗರ ಈ ಉಭಯ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಸಂವೇದನಾ ಫೌಂಡೇಶನ್ ಸಂಸ್ಥಾಪಕ ಪ್ರಕಾಶ್ ಮಲ್ಪೆ ಅವರು ಭಾಗವಹಿಸಿ ಕಾರ್ಗಿಲ್ ಕಥನಗಳನ್ನು ಹೇಳುವುದರೊಂದಿಗೆ ಇಂದಿನ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೊತೆಗೆ ದೇಶಭಕ್ತಿಯನ್ನು ರೂಢಿಸಿಕೊಳ್ಳಬೇಕು ಜೊತೆಗೆ ದೇಶ ಕಾಯುವ ಸೈನಿಕರನ್ನು ಗೌರವಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಭಾರತೀಯ ನೌಕಾ ಸೇನೆಯ ನಿವೃತ್ತ ಪೆಟ್ಟಿ ಆಫೀಸರ್ ಕೆ ಗಣೇಶ್ ರಾವ್ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಉಡುಪಿ ಜ್ಞಾನಸುಧಾ ಪ್ರಾಂಶುಪಾಲರಾದ ಸಂತೋಷ್, ಉಪಪ್ರಾಂಶುಪಾಲರಾದ ಪ್ರಕಾಶ್‌ಜೋಗಿ ಮಣಿಪಾಲ್ ಜ್ಞಾನಸುಧಾ ಪ್ರಾಂಶುಪಾಲರಾದ ಗಣೇಶ ಶೆಟ್ಟಿ, ಉಪ ಪ್ರಾಂಶುಪಾಲರಾದ ಹೇಮಂತ, ರವಿ ಜಿ. ಉಪಸ್ಥಿತರಿದ್ದರು. ಕಾರ್ಗಿಲ್ ವಿಜಯ ದಿವಸದ ಶುಭಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ಹಂಚಲಾಯಿತು. ಮಣಿಪಾಲ್ ಜ್ಞಾನಸುಧಾ ಆಂಗ್ಲ ಭಾಷಾ ಉಪನ್ಯಾಸಕಿ ಶಮಿತಾ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!