spot_img
Saturday, March 7, 2026
spot_img

ಉದ್ಯೋಗ ಮೇಳದ ಪೂರ್ವಭಾವಿಯಾಗಿ ಬೈಂದೂರಲ್ಲಿ ಉದ್ಯೋಗ ಮಾರ್ಗದರ್ಶನ

ಬೈಂದೂರು: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಇವರ ವತಿಯಿಂದ ಆಗಸ್ಟ್ ೧ ಮತ್ತು ೨ ರಂದು ನಡೆಯುವ ಬೃಹತ್ ಉದ್ಯೋಗ ಮೇಳದ ಪೂರ್ವಭಾವಿಯಾಗಿ ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಇವರ ಮಾರ್ಗದರ್ಶನದಲ್ಲಿ ಸಮೃದ್ಧ ಬೈಂದೂರು ಇವರ ಆಶ್ರಯದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇಲ್ಲಿ ಉದ್ಯೋಗ ಮಾರ್ಗದರ್ಶನ ಕಾರ್ಯಗಾರ ನಡೆಯಿತು.

ಸದರಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿವೇಕ್ ಆಳ್ವ, ಮ್ಯಾನೇಜಿಂಗ್ ಟ್ರಸ್ಟಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಇವರು ಕಾರ್ಯಕ್ರಮ ಉದ್ಘಾಟಿಸಿ ಉದ್ಯೋಗ ಮೇಳಕ್ಕೆ ಸರಿಸುಮಾರು ೩೦೦ಕ್ಕೂ ಹೆಚ್ಚು ಕಂಪನಿಗಳು ಆಗಮಿಸುವ ನಿರೀಕ್ಷೆಯಿದ್ದು, ಸರಿ ಸುಮಾರು ೧೬೦೦೦ ಉದ್ಯೋಗಾವಕಾಶ ಸೃಷ್ಟಿಯಾಗುವ ಸಾಧ್ಯತೆ ಇದೆ ಹಾಗಾಗಿ ಬೈಂದೂರು ಸುತ್ತಮುತ್ತಲಿನ ಉದ್ಯೋಗಾಕಾಂಕ್ಷಿಗಳು ಈ ಬಗ್ಗೆ ಆಸಕ್ತಿ ವಹಿಸಿ ಆತ್ಮವಿಶ್ವಾಸದಿಂದ ಉದ್ಯೋಗ ಮೇಳಕ್ಕೆ ಭಾಗವಹಿಸಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಕರೆ ನೀಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು ನಾಗರಾಜ್ ಶೆಟ್ಟಿ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕು. ಪ್ರಜ್ಞಾ, ಸಹಾಯಕ ಪ್ರಾಧ್ಯಾಪಕರು ಸರಕಾರಿ ಪದವಿ ಕಾಲೇಜು ಶಂಕರನಾರಾಯಣ, ಚಿತ್ರ ಪಡಿಯಾರ್ ಸಂಚಾಲಕರು IQAC, ವಿನೋದ್ ಪಟ್ಟದ್ ಪ್ಲೇಸ್ಮೆಂಟ್ ಸೆಲ್ ಆಫೀಸರ್, ಶ್ರೀಮತಿ ಅನುರಾಧ ಗುರುರಾಜ್ ಗಂಟಿಹೊಳೆ, ಸಮೃದ್ಧ ಬೈಂದೂರು ಪದಾಧಿಕಾರಿಗಳು, ಕಾಲೇಜಿನ ಅಧ್ಯಾಪಕ ವೃಂದ ಹಾಗೂ 300 ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನವೀನ್ ಹೆಚ್. ಜೆ ಸಹಾಯಕ ಪ್ರಾಧ್ಯಾಪಕರು ಸ್ವಾಗತಿಸಿ, ಡಾ. ಆನಂದ್ ಸಿ ಸಹಾಯಕ ಪ್ರಾಧ್ಯಾಪಕರು ವಂದಿಸಿದರು. ಯೋಗೀಶ್ ಕೈರೋಡಿ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!