Sunday, September 8, 2024

ಸಾಲಿಗ್ರಾಮ ಪಟ್ಟಣ ಪಂಚಾಯತ್: ಅಧ್ಯಕ್ಷರಾಗಿ ಸುಲತಾ ಹೆಗ್ಡೆ, ಉಪಾಧ್ಯಕ್ಷರಾಗಿ ಅನುಸೂಯ ಆಯ್ಕೆ

 


ಸಾಲಿಗ್ರಾಮ, ನ.2: ಸಾಲಿಗ್ರಾಮ ಪಟ್ಟಣ ಪಂಚಾಯತ್‍ನ ನೂತನ ಅಧ್ಯಕ್ಷರಾಗಿ ಬಿಜೆಪಿಯ ಸುಲತಾ ಹೆಗ್ಡೆ, ಉಪಾಧ್ಯಕ್ಷರಾಗಿ ಅನುಸೂಯ ಎ.ಹೇರ್ಳೆ ಆಯ್ಕೆಯಾಗಿದ್ದಾರೆ.

ಸಾಲಿಗ್ರಾಮ ಪಟ್ಟಣ ಪಂಚಾಯತ್‍ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆಗೆ ನಡೆಯಿತು. ಬಿಜೆಪಿಯಿಂದ ಇಬ್ಬರು ಮಹಿಳಾ ಅಭ್ಯರ್ಥಿಗಳು ಮೀಸಲಾತಿಯಲ್ಲಿ ಇದ್ದರೂ ಒಮ್ಮತದ ಅಭ್ಯರ್ಥಿಯಾಗಿ ಸುಲತಾ ಹೆಗ್ಡೆ ಏಕಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಗೊಂಡರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಅನುಸೂಯ ಆನಂದರಾಮ ಹೇರ್ಳೆ, ಕಾಂಗ್ರೆಸ್‍ನಿಂದ ಝಾಹೀರಾ ಹಬೀಬ್ ನಾಮಪತ್ರ ಸಲ್ಲಿಸಿದರು. ಒಟ್ಟು ಸಂಖ್ಯಾ ಬಲ 16 ಸದಸ್ಯಬಲದಲ್ಲಿ ಭಾಜಪ 10, ಕಾಂಗ್ರೆಸ್ 5, ಪಕ್ಷೇತರ 1 ಸ್ಥಾನ ಹೊಂದಿದ್ದರಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅನುಸೂಯ ಆನಂದರಾಮ ಹೇರ್ಳೆ ಗೆಲುವು ಸಾಧಿಸಿದರು.

ಈ ಸಂದರ್ಭದಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಉಪಸ್ಥಿತರಿದ್ದು, ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದರು.

ನೂತನ ಅಧ್ಯಕ್ಷೆ ಸುಲತಾ ಹೆಗ್ಡೆ ಮಾತನಾಡಿ ಸ್ವಚ್ಛ ಸುಂದರ ಸಾಲಿಗ್ರಾಮದ ಕನಸು ನನಸಾಗಿಸಲು ಪಣತೊಡುತ್ತದೆ. ಒಳಚರಂಡಿ, ರಸ್ತೆಗಳ ಅಭಿವೃದ್ಧಿ ಸೇರಿದಂತೆ ಹಲವು ಹೊಸ ಹೊಸ ಕಾರ್ಯಕ್ರಮಗಳನ್ನು ಸ್ಥಳೀಯ ಶಾಸಕ ಹಾಗೂ ಸಂಸದೆ ನೆರವಿನೊಂದಿಗೆ ಮಾಡುತ್ತೇವೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಕುಂದಾಪುರ ಕ್ಷೇತ್ರಾಧ್ಯಕ್ಷ ಶಂಕರ ಅಂಕದಕಟ್ಟೆ, ಮಾಜಿ ಕ್ಷೇತ್ರಾಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ, ಬ್ರಹ್ಮಾವರ ತಾ.ಪಂ ಅಧ್ಯಕ್ಷೆ ಜ್ಯೋತಿ ಉದಯ್ ಪೂಜಾರಿ, ಪಕ್ಷದ ಮುಖಂಡರುಗಳಾದ ಕಿರಣ್ ಕುಮಾರ್ ಕೊಡ್ಗಿ, ಸುರೇಶ್ ಶೆಟ್ಟಿ, ವಸಂತ ಕಾಂಚನ್, ಮಾಧವ ಕಾರ್ಕಡ, ಜಯಾನಂದ ಪೂಜಾರಿ, ಗುಣರತ್ನ ಪೂಜಾರಿ, ಪಟ್ಟಣ ಪಂಚಾಯತ್ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

ಚುನಾವಣಾ ಅಧಿಕಾರಿಯಾಗಿ ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೌರಯ್ಯ ಚುನಾವಣಾ ಪ್ರಕ್ರಿಯೆ ನೆರವೇರಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!