spot_img
Sunday, March 15, 2026
spot_img

ಹೆಸಕುತ್ತೂರು ಪ್ರಾಥಮಿಕ ಶಾಲೆ: ಕುಂದಾಪುರ ವಲಯ ಮಟ್ಟದ ಮಟ್ಟದ ಯೋಗಾಸನ ಸ್ಪರ್ಧೆ

ಕುಂದಾಪುರ :“ನಿಯಮಿತವಾಗಿ ಮತ್ತು ಕ್ರಮಬದ್ಧವಾಗಿ ಯೋಗ ಮಾಡುವುದರಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು” ಎಂದು ಕೊರ್ಗಿ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಉಮಾವತಿ ಎಲ್ ಶೆಟ್ಟಿ ಅವರು ನುಡಿದರು.
ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸಕುತ್ತೂರಿನಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಯೋಗಾಸನ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.
                ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸುಧಾಕರ ಕುಲಾಲ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕೊರ್ಗಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಪಲ್ಲವಿ ಕುಲಾಲ, ಪಂಚಾಯತ್ ಸದಸ್ಯರಾದ ರಾಘವೇಂದ್ರ ಶೆಟ್ಟಿ , ಅಶೋಕ ಮೊಗವೀರ, ದಾನಿಗಳಾದ ಗಣೇಶ ಪ್ರಸಾದ್ ಕಾಂಚನ್, ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ ಶೆಟ್ಟಿ ಕೆ.ಎನ್, ಕುಂದಾಪುರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶೋಭಾ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸತ್ಯನಾರಾಯಣ ,ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಕುಸುಮಾಕರ ಶೆಟ್ಟಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಶರತ್ ಕುಮಾರ್ ಶೆಟ್ಟಿ, ಕುಂದಾಪುರ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಗ್ರೇಡ್ 1ರ ಅಧ್ಯಕ್ಷರಾದ ಉದಯ ಮಡಿವಾಳ, ಕುಂದಾಪುರ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಗ್ರೇಡ್ 2ರ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಶಂಕರ್ ನಾರಾಯಣ ಕಾಲೇಜಿನ ಹಿರಿಯ ಉಪನ್ಯಾಸಕರಾದ ಕುಮಾರ್, ನಿವೃತ್ತ ಶಿಕ್ಷಕರಾದ ಕಿರಣ್ ಕುಮಾರ್, ಸರಕಾರಿ ಪ್ರೌಢಶಾಲೆ ಹೆಸಕುತ್ತೂರಿನ ಮುಖ್ಯ ಶಿಕ್ಷಕರಾದ ಅಬ್ದುಲ್ ರವೂಫ್, ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಸಂಜೀವ ಎಂ ,ಸಹ ಶಿಕ್ಷಕಿ ಸ್ವಾತಿ ಬಿ, ಗೌರವ ಶಿಕ್ಷಕಿ ಮಧುರ, ಅತಿಥಿ ಶಿಕ್ಷಕಿ ಪವಿತ್ರ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಶೇಖರ್ ಕುಮಾರ್ ಸ್ವಾಗತಿಸಿದರು. ಸಹ ಶಿಕ್ಷಕ ರವೀಂದ್ರ ನಾಯಕ್ ವಂದಿಸಿದರು. ಸಹ ಶಿಕ್ಷಕ ವಿಜಯ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!