spot_img
Sunday, March 15, 2026
spot_img

ಆಲೂರು: ಸಿರಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಕುಂದಾಪುರ ತಾಲೂಕಿನ ಚಿತ್ತೂರು ವಲಯದ ಆಲೂರು ಒಕ್ಕೂಟದ ಸಿರಿ ಜ್ಞಾನ ವಿಕಾಸ ಕೇಂದ್ರದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ಕಾಳಿಕಾಂಬ ನಗರದ ವಿಶ್ವಕರ್ಮ ಸಭಾಭವನ ಆಲೂರು ಇಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರದ ಸದಸ್ಯೆ ಸೀತಮ್ಮ ವಹಿಸಿದ್ದರು. ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ವರ್ಷ ತುಂಬಿದ ಸವಿನೆನಪಿಗಾಗಿ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕುಂದಾಪುರ ತಾಲೂಕಿನ ಭಗವದ್ಗೀತೆ ಸಮಿತಿಯ ಪ್ರಧಾನ ಕಾರ್ಯದರ್ಶಿ ರಶ್ಮಿರಾಜ್ ರವರು ಗ್ರಾಮೀಣ ಭಾಗದಲ್ಲಿರುವ ಮಹಿಳೆಯರು ಇಂದು ಎಲ್ಲಾ ಕಾರ್ಯಕ್ಷೇತ್ರದಲ್ಲಿ ಉತ್ತಮವಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಎಲ್ಲ ಜವಾಬ್ದಾರಿಯನ್ನು ನಿಭಾಯಿಸಿಕೊಂಡು ಹೋಗುವ ಬಗ್ಗೆ ಮಾತನಾಡಿದರು.

ನಿವೃತ್ತ ಯೋಧ ದಿನೇಶ್, ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ್ ಎನ್ ದೇವಾಡಿಗ, ಕುಂದಾಪುರ ತಾಲೂಕು ಯೋಜನಾಧಿಕಾರಿ ಉಮೇಶ್ ಶೆಟ್ಟಿ, ಚಿತ್ತೂರು ವಲಯದ ಮೇಲ್ವಿಚಾರಕ ಮಂಜುನಾಥ್, ಆಲೂರು ಒಕ್ಕೂಟದ ಉಪಾಧ್ಯಕ್ಷೆ ಚಂದ್ರಾವತಿ, ಒಕ್ಕೂಟದ ಕಾರ್ಯದರ್ಶಿ ಶರಾವತಿ, ಕೇಂದ್ರದ ಸಂಯೋಜಕಿ ಮಾಲತಿ ಉಪಸ್ಥಿತರಿದ್ದರು.

ಜ್ಞಾನವಿಕಾಸ ಸಮನ್ವಯಾಧಿಕಾರಿ ರೇಣುಕಾ ಕೋಡಪದವು ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ಚಂದ್ರಮತಿ ಸ್ವಾಗತಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!