spot_img
Sunday, March 15, 2026
spot_img

ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಎಂ ಎಸ್ ಸಿ ಸ್ನಾತಕೋತ್ತರ ಶಿಕ್ಷಣ

ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಈ ಶೈಕ್ಷಣಿಕ ವರ್ಷದಿಂದ 2025-26 ರಿಂದ ಕಂಪ್ಯೂಟರ್ ಸೈನ್ಸ್ ನಲ್ಲಿ ಸ್ನಾತಕೋತ್ತರ ಪದವಿ ಆರಂಭವಾಗಲಿದೆ. ಬಿ. ಎಸ್. ಸಿ ಕಂಪ್ಯೂಟರ್ ಸೈನ್ಸ್ ಮತ್ತು ಬಿಸಿ‌ಎ ಪದವಿ ಶಿಕ್ಷಣ ಪಡೆದವರು ತಮ್ಮ ದಾಖಲಾತಿಯನ್ನು ಈ ಕೋರ್ಸ್ ಗೆ ಮಾಡಿಕೊಳ್ಳಬಹುದು ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿಷ್ಠಿತ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅತ್ಯುತ್ತಮ ಮೂಲ ಸೌಕರ್ಯ ಮತ್ತು ಶೈಕ್ಷಣಿಕ ಸೌಲಭ್ಯಗಳಿವೆ. ಮುಖ್ಯವಾಗಿ ಪ್ರಧಾನಮಂತ್ರಿ ಕೌಶಲ್ಯ ಕೇಂದ್ರವಿದೆ. ಉತ್ತಮ ಶೈಕ್ಷಣಿಕ ವಾತಾವರಣವಿದ್ದು ಇಂಟರ್ನ್ಶಿಪ್, ಪ್ರಾಜೆಕ್ಟ್ ವರ್ಕ್, ಮೈನರ್ ರಿಸರ್ಚ್ ಪ್ರಾಜೆಕ್ಟ್, ಮಾಡಲು ಉತ್ತಮ ಅವಕಾಶವಿದೆ. ವಿವಿಧ ಕಂಪನಿಗಳೊಂದಿಗೆ ಎಮ್.ಒ.ಯು ಮಾಡಿಕೊಂಡಿದ್ದು ವ್ರತ್ತಿ ಮಾರ್ಗದರ್ಶನ ಮತ್ತು ಉದ್ಯೋಗಾವಕಾಶ ಕೇಂದ್ರ ಈ ನೆಲೆಯಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಅನುಭವಿ ಉಪನ್ಯಾಸಕರು, ಸುಸಜ್ಜಿತ ಗ್ರಂಥಾಲಯ, ಮತ್ತು ಪ್ರಯೋಗಾಲಯಗಳು , ವಿಭಾಗೀಯ ಗ್ರಂಥಾಲಯ ವಿದ್ಯಾರ್ಥಿನಿ ನಿಲಯ ಮ್ಯಾನೇಜ್ಮೆಂಟ್ ಸ್ಕಾಲರ್ಶಿಪ್ ಸೌಲಭ್ಯಗಳು ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಪೂರಕ ವಾತಾವರಣವನ್ನು ಕಲ್ಪಿಸಿ ಕೊಡುತ್ತವೆ. ಪ್ರವೇಶಾತಿಗಾಗಿ ಕಾಲೇಜನ್ನು ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದೆ

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!