spot_img
Sunday, March 15, 2026
spot_img

ವಂಡ್ಸೆ ಹೋಬಳಿ ಮಟ್ಟದ ವಾಲಿಬಾಲ್, ಥ್ರೋಬಾಲ್ ಪಂದ್ಯಾಟ

ಕುಂದಾಪುರ: ವಂಡ್ಸೆ ಹೋಬಳಿ ಮಟ್ಟದ 14ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಮತ್ತು ಥ್ರೋ ಬಾಲ್ ಪಂದ್ಯಾಟಗಳ ಉದ್ಘಾಟನಾ ಕಾರ್ಯಕ್ರಮ ಆ.5ರಂದು ವಂಡ್ಸೆ ಸ.ಮಾ.ಹಿ.ಪ್ರಾ ಶಾಲೆಯ ಸಾರಥ್ಯದಲ್ಲಿ ನಡೆಯಿತು.

ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಅವಿನಾಶ್ ವಹಿಸಿ, ಪಂದ್ಯಾಟವನ್ನು ಉದ್ಘಾಟಿಸಿದರು.

ಶ್ರೀ ಮೂಕಾಂಬಿಕ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಉದಯ್ ಕುಮಾರ್ ಶೆಟ್ಟಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಎಸ್‌ಡಿ‌ಎಂಸಿ ಸದಸ್ಯರುಗಳಾದ ಶ್ರೀಧರ್, ಸತೀಶ್, ವಂಡ್ಸೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ನಾಗರಾಜ ಶೆಟ್ಟಿ, ಶೈಲಜಾ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ರವಿಶಂಕರ್ ಹೆಗ್ಡೆ, ಸರ್ಕಾರಿ ನೌಕರ ಸಂಘದ ಪ್ರತಿನಿಧಿ ಪ್ರತಾಪ್ ಕುಮಾರ್ ಶೆಟ್ಟಿ, ಪ್ರಭಾರ ಮುಖ್ಯ ಶಿಕ್ಷಕರಾದ ಸೋಮರಾಯ ಜನ್ನು ಉಪಸ್ಥಿತರಿದ್ದರು.

ದೈಹಿಕ ಶಿಕ್ಷಣ ಶಿಕ್ಷಕರಾದ ರಾಜು ಎನ್ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕ ಸೋಮರಾಯ ಜನ್ನು ಸ್ವಾಗತಿಸಿದರು, ಸಹಶಿಕ್ಷಕ ಸದಾಶಿವ ವಂದಿಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ನೆರವೇರಿಸಿದರು. ಶಾಲೆಯ ಎಲ್ಲ ಶಿಕ್ಷಕರು ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!