Sunday, September 8, 2024

ಕುಂದಾಪುರ ಪುರಸಭೆ ಅಧ್ಯಕ್ಷರಾಗಿ ವೀಣಾ ಭಾಸ್ಕರ, ಉಪಾಧ್ಯಕ್ಷರಾಗಿ ಸಂದೀಪ್ ಖಾರ್ವಿ ಅವಿರೋಧ ಆಯ್ಕೆ

 

ಕುಂದಾಪುರ, ನ.3: ಕುಂದಾಪುರ ಪುರಸಭೆಯ 9ನೇ ಅವಧಿಯ ಅಧ್ಯಕ್ಷರಾಗಿ ಬಿಜೆಪಿಯ ವೀಣಾ ಭಾಸ್ಕರ, ಉಪಾಧ್ಯಕ್ಷರಾಗಿ ಸಂದೀಪ್ ಖಾರ್ವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನ.3ರಂದು ಅಧ್ಯಕ್ಷರ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆದು ಬಿಜೆಪಿಯ ಒಮ್ಮತ ಅಭ್ಯರ್ಥಿಗಳಾಗಿ ಅಧ್ಯಕ್ಷ ಸ್ಥಾನಕ್ಕೆ ವೀಣಾ ಭಾಸ್ಕರ, ಉಪಾಧ್ಯಕ್ಷ ಸ್ಥಾನಕ್ಕೆ ಸಂದೀಪ್ ಖಾರ್ವಿ ಅವರು ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಗೊಂಡರು.

ಈ ಸಂದರ್ಭದಲ್ಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿಜೆಪಿ ಕುಂದಾಪುರ ಮಂಡಲದ ಅಧ್ಯಕ್ಷ ಶಂಕರ ಅಂಕದಕಟ್ಟೆ, ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಲತಾ ಸುರೇಶ ಶೆಟ್ಟಿ, ಲಕ್ಷ್ಮೀ ಮಂಜು ಬಿಲ್ಲವ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಕುಂದಾಪುರ ಮಂಡಲದ ಮಾಜಿ ಅಧ್ಯಕ್ಷ ಸುರೇಶ ಶೆಟ್ಟಿ ಕಾಡೂರು, ತಾ.ಪಂ.ಸದಸ್ಯ ಸುರೇಂದ್ರ ಖಾರ್ವಿ, ಮಹಿಳಾ ಮೋರ್ಛಾ ಅಧ್ಯಕ್ಷೆ ಗುಣರತ್ನ, ತಾ.ಪಂ.ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ರೂಪಾ ಪೈ, ನಗರ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ವಿಜಯ ಎಸ್.ಪೂಜಾರಿ, ಬಿಜೆಪಿ ಕುಂದಾಪುರ ಕ್ಷೇತ್ರ ಪ್ರಭಾರಿ ಬಾಲಚಂದ್ರ ಭಟ್, ಪುರಸಭೆ ಮಾಜಿ ಅಧ್ಯಕ್ಷೆ ವಾಸಂತಿ ಸಾರಂಗ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುರೇಶ ಶೆಟ್ಟಿ, ಯುವಮೋರ್ಚಾದ ಅವಿನಾಶ ಶೆಟ್ಟಿ ಉಳ್ತೂರು, ಸುನೀಲ್ ಹೇರಿಕುದ್ರು, ಬಿಜೆಪಿ ಕಾರ್ಯದರ್ಶಿ ಸುರೇಂದ್ರ ಕಾಂಚನ್, ಮಂಜು ಬಿಲ್ಲವ, ವಕ್ವಾಡಿ ಸತೀಶ್ ಶೆಟ್ಟಿ, ಪುರಸಭೆ ಮಾಜಿ ಸದಸ್ಯ ರವಿರಾಜ ಖಾರ್ವಿ, ಪುಷ್ಪಶೇಟ್, ಸುಧೀರ್ ಕುಮಾರ್ ಶೆಟ್ಟಿ, ದಿವಾಕರ ಪೂಜಾರಿ, ರಾಜೇಶ ಕಡ್ಗಿಮನೆ, ಜೀವನ ಕೋಟೇಶ್ವರ ಮೊದಲಾದವರು ಉಪಸ್ಥಿತರಿದ್ದರು.

ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ಆನಂದಪ್ಪ ನಾಯಕ್ ಸಹಕರಿಸಿದರು. ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಈ ಸಂದರ್ಭದಲ್ಲಿ ಹಾಜರಿದ್ದರು. ಪುರಸಭೆ ಸದಸ್ಯರಾದ ಮೋಹನದಾಸ ಶೆಣೈ, ದೇವಕಿ ಸಣ್ಣಯ್ಯ, ಚಂದ್ರಶೇಖರ ಖಾರ್ವಿ, ಗಿರೀಶ್ ಜಿ.ಕೆ., ಅಭಿನಂದಿಸಿ ಮಾತನಾಡಿದರು.

ಅಧಿಕಾರ ಸ್ವೀಕರಿಸಿ ಮಾತನಾಡಿದ ಅಧ್ಯಕ್ಷೆ ವೀಣಾ ಭಾಸ್ಕರ ಅವರು, ಹಿಂದಿನ ಪುರಸಭೆಯ ಆಡಳಿತ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಮುಂದಿನ ದಿನಗಳಲ್ಲಿ ಶಾಸಕರ, ಸಂಸದರ ಮಾರ್ಗದರ್ಶನದಲ್ಲಿ ಎಲ್ಲ ಸದಸ್ಯರ ಸಹಕಾರ ಪಡೆದುಕೊಂಡು ಪುರಸಭೆಯ ಅಭಿವೃದ್ಧಿ ಕೆಲಸ ಮಾಡುತ್ತೇನೆ ಎಂದರು.

ಉಪಾಧ್ಯಕ್ಷರಾದ ಸಂದೀಪ್ ಖಾರ್ವಿ ಮಾತನಾಡಿ, ನನ್ನನ್ನು ಆಯ್ಕೆ ಮಾಡಿದ ವಾರ್ಡಿನ ಮತದಾರರಿಗೂ ಹಾಗೂ ಪಕ್ಷದ ಹಿರಿಯರಿಗೆ ನಾನು ಋಣಿಯಾಗಿದ್ದೇನೆ. ಕುಂದಾಪುರ ಪುರಸಭೆಯನ್ನು ಮಾದರಿ ಪುರಸಭೆಯನ್ನಾಗಿಸಲು ನಾನು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.

ಕುಂದಾಪುರ ಪುರಸಭೆಯ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ‘ಎ’ ಪ್ರವರ್ಗಕ್ಕೆ ಮೀಸಲಾಗಿತ್ತು. ಒಟ್ಟು 23 ಸದಸ್ಯ ಬಲ ಇರುವ ಪುರಸಭೆಯಲ್ಲಿ 14 ಬಿಜೆಪಿ, 8 ಕಾಂಗ್ರೆಸ್, 1 ಪಕ್ಷೇತರ ಸದಸ್ಯರಿದ್ದಾರೆ. ಅಧ್ಯಕ್ಷೆಯಾಗಿರುವ ವೀಣಾ ಭಾಸ್ಕರ ಅವರು ಟಿ.ಟಿ ರೋಡ್ ವಾರ್ಡ್ ಪ್ರತಿನಿಧಿಸುತ್ತಿದ್ದಾರೆ. ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಂದೀಪ್ ಖಾರ್ವಿ ಬಹದ್ದೂರ್ ಷಾ ರೋಡ್ ವಾರ್ಡ್‍ನ್ನು ಪ್ರತಿನಿಧಿಸುತ್ತಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!