spot_img
Saturday, March 14, 2026
spot_img

ಮಾಧ್ಯಮ ಪ್ರಪಂಚದಲ್ಲಿ ಸೃಜನಾತ್ಮಕ ಬರವಣಿಗೆಯಿಂದ ಉದ್ಯೋಗವಕಾಶ-ಉದಯ ಕುಮಾರ್ ಶೆಟ್ಟಿ

ಶಂಕರನಾರಾಯಣ: ಆಧುನಿಕ ಜಗತ್ತಿನಲ್ಲಿ ಕೊನೆಯ ವ್ಯಕ್ತಿಗೂ ಮಾಹಿತಿ ತಲುಪಿಸುತ್ತಿರುವ ಮಾಧ್ಯಮ ಪ್ರಪಂಚ ವಿಶಾಲ ವ್ಯಾಪ್ತಿ ಹೊಂದಿದ್ದು. ಅದರಲ್ಲಿನ ಉದ್ಯೋಗ ಅವಕಾಶಗಳಿಗೆ ಸೃಜನಾತ್ಮಕ ಬರವಣಿಗೆಯೆ ತಳಹದಿ ಎಂದು ಪತ್ರಕರ್ತ ಹೆಬ್ರಿ ಉದಯ್ ಕುಮಾರ್ ಶೆಟ್ಟಿ ಅಭಿಪ್ರಾಯ ಪಟ್ಟರು.
ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತ್ತಕೋತ್ತರ ಅಧ್ಯಯನ ಕೇಂದ್ರ, ಶಂಕರನಾರಾಯಣ ಇಲ್ಲಿ, ನೆರಳು ಚಾರಿಟೇಬಲ್ ಟ್ರಸ್ಟ್ ಅರಸಮ್ಮಕಾನು -ಶೇಡಿಮನೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಪ್ರೇರಣಾ ಸರಣಿ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳು ದಿನವೂ ಪತ್ರಿಕೆಗಳನ್ನು ಓದುವ ಅಭ್ಯಾಸವನ್ನು ಬೆಳಸಿಕೊಳ್ಳಬೇಕು. ಓದುವ ಅಭ್ಯಾಸವು ಬರವಣಿಗೆಯ ಗುಣಮಟ್ಟವನ್ನು ಹೆಚ್ಚಿಸುತ್ತದೆ. ಚಿಕ್ಕ ಪುಟ್ಟ ಕವಿತೆಗಳನ್ನು ಬರೆಯಲು ಪ್ರಾರಂಭಿಸಿದರೆ ನಮ್ಮೊಳಗಿನ ಅಭಿವ್ಯಕ್ತಿಯ ಸೃಜನಶೀಲತೆ ಹೆಚ್ಚಿಸಬಹುದು ಎಂದು ಹೇಳಿದರು.
ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳು ಈಗಿನಿಂದಲೇ ಬರವಣಿಗೆ ಆರಂಭಿಸಿದರೆ ಪದವಿ ನಂತರ ಉತ್ತಮ ಉದ್ಯೋಗ ಪಡೆಯಲು, ಸಮಾಜಮುಖಿಯಾಗಿ ನಿಲ್ಲಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ನೆರಳು ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷ ಕೆ. ರಾಧಾಕೃಷ್ಣ ಕ್ರಮಧಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಆಂತರಿಕ ಗುಣಮಟ್ಟ ಭರವಸ ಕೋಶದ ಸಂಚಾಲಕ ಡಾ. ವಸಂತ್.ಜಿ ಸ್ವಾಗತಿಸಿದರು. ಇಂಗ್ಲೀಷ್ ಸಹಾಯಕ ಪ್ರಾಧ್ಯಾಪಕ  ರಮೇಶ್ ವಂದಿಸಿದರು. ಕನ್ನಡ ಸಹಾಯಕ ಪ್ರಾಧ್ಯಾಪಕ ಸಚಿನ್ ಕಾರ್ಯಕ್ರಮ ನಿರೂಪಿಸಿದರು. ನೆರಳು ಚಾರಿಟೇಬಲ್ ಟ್ರಸ್ಟಿನ ಸದಸ್ಯ ಪ್ರವೀಣ್, ನಿತ್ಯಾನಂದ ಭಟ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!