spot_img
Saturday, March 14, 2026
spot_img

ಕೋಟ ಪದವಿ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

ಕೋಟ: ಉತ್ತಮ ಗುಣಮಟ್ಟದ ಪದವಿ ಶಿಕ್ಷಣದಿಂದ ಗ್ರಾಮೀಣ ಪ್ರದೇಶ ಬಡ ವಿದ್ಯಾರ್ಥಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಾಧ್ಯವಿದೆ ಎಂದು ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾಣಿಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ರಘು ನಾಯ್ಕ್ ಹೇಳಿದರು.

ಆ.1ರಂದು ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕರೆ ಇಲ್ಲಿ ಹಮ್ಮಿಕೊಳ್ಳಲಾದ ಅಭಿವಿನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ, ತಮ್ಮ ಉದ್ಘಾಟನ ಭಾಷಣದಲ್ಲಿ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ರಾಜೇಂದ್ರ ಎಸ್ ನಾಯಕ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವಿದ್ಯಾರ್ಥಿಗಳಿಗೆ ಮಾನಸಿಕ ಸ್ಥಿರತೆ ಮತ್ತು ನಿರಂತರ ಪ್ರಯತ್ನದಿಂದ ಸಮಾಜದಲ್ಲಿ ಉನ್ನತ ಸ್ಥಾನಕ್ಕೆರುವಂತೆ ಕರೆನೀಡಿದರು.

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಕ್ಷೇಮಪಾಲನ ಅಧಿಕಾರಿ ಪ್ರೊ.ರಮೇಶ್ ಆಚಾರ್ ಮತ್ತು ಐ.ಕ್ಯೂ.ಎ.ಸಿ ಸಂಚಾಲಕ ಡಾ.ಸುಬ್ರಮಣ್ಯ ಉಪಸ್ಥಿತರಿದ್ದು. ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು, ಮಮತಾ ಉಪನ್ಯಾಸಕಿ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಸೌಮ್ಯ ಕೆ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!