spot_img
Sunday, March 15, 2026
spot_img

ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಉಡುಪಿಯ ಬಾಲಕಿಯರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ಪದಕ

ಉಡುಪಿ: ಮಹಿಳಾ ಕ್ರೀಡಾಪಟುಗಳನ್ನು ಉತ್ತೇಜಿಸುವ ಸಲುವಾಗಿ ಎಚ್. ಸಿ. ಎಲ್. ಫೌಂಡೇಶನ್ ನವರು ಚೆನ್ನೈನಲ್ಲಿ ನಡೆಸಿದ ಏಳನೇ ಆವೃತ್ತಿಯ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಉಡುಪಿಯ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಪದಕ ವಿಜೇತರಾಗಿದ್ದಾರೆ. ಉದ್ದಜಿಗಿತ ವಿಭಾಗದಲ್ಲಿ ಕಾಲೇಜು ವಿಭಾಗದ ಕುಮಾರಿ ಪೂರ್ಣಿಮಾ ಚಿನ್ನದ ಪದಕವನ್ನು ಪಡೆದರೆ, ಹರ್ಡಲ್ಸನಲ್ಲಿ ಪ್ರೌಢಶಾಲಾ ವಿಭಾಗದ ಒಂಭತ್ತನೆಯ ತರಗತಿಯ ಕುಮಾರಿ ಮಾನ್ಯ ಬೆಳ್ಳಿ ಪದಕ ವಿಜೇತರಾಗಿದ್ದಾರೆ.

ರಾಜ್ಯವನ್ನು ಪ್ರತಿನಿಧಿಸಿ ರಾಷ್ಟ್ರೀಯ ಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಸಂಸ್ಥೆಯ ಪರವಾಗಿ ಸಂಭ್ರಮದ ಸ್ವಾಗತವನ್ನು ಕೋರಲಾಯಿತು. ಪ್ರಾಂಶುಪಾಲರಾದ ಜಗದೀಶಕುಮಾರ ಮತ್ತು ಮುಖ್ಯೋಪಾಧ್ಯಾಯರಾದ ಶ್ರೀಮತಿ ಇಂದಿರಾ ಇವರು ಪದಕ ವಿಜೇತರನ್ನು ಸನ್ಮಾನಿಸಿದರು. ದೈಹಿಕ ಶಿಕ್ಷಕರಾದ ವಸಂತ ಜೋಗಿಯವರು ಕ್ರೀಡಾಪಟುಗಳ ಸಾಧನೆಯ ಹೆಜ್ಜೆಗಳ ಬಗ್ಗೆ ಮಾತನಾಡಿದರು. ಶಿಕ್ಷಣ ಸೇವಾ ಸಮಿತಿಯ ಶೇಖರ ಕೋಟ್ಯಾನ್, ಉಪನ್ಯಾಸಕ ಮತ್ತು ಅಧ್ಯಾಪಕ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!