spot_img
Sunday, March 15, 2026
spot_img

ಗಂಗೊಳ್ಳಿಯ ವಿವಿಧೆಡೆ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ

ಗಂಗೊಳ್ಳಿ : ಗಂಗೊಳ್ಳಿಯ ವಿವಿಧೆಡೆ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯನ್ನು ಭಕ್ತಿ ಶ್ರದ್ಧಾಪೂರ್ವಕ ಸರಳವಾಗಿ ವಿಜೃಂಭಣೆಯಿಂದ ಶುಕ್ರವಾರ ಆಚರಿಸಲಾಯಿತು.

ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಮಹಿಳಾ ಸಂಘದ ವತಿಯಿಂದ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತವನ್ನು ಆಚರಿಸಲಾಯಿತು. ಪುರೋಹಿತರಾದ ಜಿ.ರಾಘವೇಂದ್ರ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ಮಹಿಳಾ ಸಂಘದ ಅಧ್ಯಕ್ಷೆ ಸುರೇಖಾ ಕಾನೋಜಿ, ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಗಂಗೊಳ್ಳಿಯ ಕಲೈಕಾರ ಮಠ ಶ್ರೀ ನಗರ ಮಹಾಕಾಳಿ ಮತ್ತು ಕಲ್ಲುಕುಟ್ಟಿಗ ದೇವಸ್ಥಾನ ನಡೆದ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯಲ್ಲಿ ಮುತ್ತೈದೆಯರು, ಸುಮಂಗಲಿಯರು ಪಾಲ್ಗೊಂಡು ಶ್ರೀದೇವರ ಪ್ರಸಾದ ಸ್ವೀಕರಿಸಿದರು. ಗಂಗೊಳ್ಳಿಯ ವಿವಿಧ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!