spot_img
Monday, March 16, 2026
spot_img

ಶಿರೂರು : ಬೈಂದೂರು ಹೋಬಳಿ ಮಟ್ಟದ ’ಕಬಡ್ಡಿ’ ಪಂದ್ಯಾಟ ಉದ್ಘಾಟನೆ

ಬೈಂದೂರು: ಬೈಂದೂರು ಹೋಬಳಿ ಮಟ್ಟದ ೧೪ರ ವಯೋಮಾನದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭ ಆ. 8 ರಂದು ನಡೆಯಿತು.

ಶಿರೂರು ಜ್ಞಾನದಾ ಶೈಕ್ಷಣಿಕ ಸಂಸ್ಥೆಯ ಸಾರಥ್ಯದಲ್ಲಿ ನಡೆದ ಕಬ್ಬಡ್ಡಿ ಪಂದ್ಯಾಟವನ್ನು ಶಿರೂರು ಜ್ಞಾನದಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ರಾಮಚಂದ್ರ ಬಿ ಶಿರೂರಕರ್ ಉದ್ಘಾಟಿಸಿ ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಎಲ್ಲರೂ ಕ್ರೀಡಾಸ್ಪೂರ್ತಿಯಿಂದ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ್ ನಾಯ್ಕ ಸಂಸ್ಥೆಯ ಶಿಸ್ತುಬದ್ದ ಕ್ರೀಡಾಕೂಟದ ವ್ಯವಸ್ಥೆಯನ್ನು ಶ್ಲಾಘಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಜ್ಞಾನದಾ ಶಿಕ್ಷಣ ಸಂಸ್ಥೆಯ ಖಜಾಂಚಿ ಚಂಪಾ ಆರ್ ಶಿರೂರಕರ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಜಯಕುಮಾರ್ ಶೆಟ್ಟಿ ತಾಲೂಕು ಯುವಜನ ಕ್ರೀಡಾಧಿಕಾರಿ ಪ್ರಭಾಕರ್ ಎಸ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಉಪಾಧ್ಯಕ್ಷ ಗುರುರಾಜ್ ಬಿಲ್ಲವ, ಸಿ ಆರ್ ಪಿ ಗಣೇಶ್ ಪೂಜಾರಿ ಉಪಸ್ಥಿತರಿದ್ದರು.

ಸಂಸ್ಥೆಯ ಪ್ರಾಂಶುಪಾಲರಾದ ಡಾ. ರವಿದಾಸ್ ಶೆಟ್ಟಿ ಸ್ವಾಗತಿಸಿದರು, ಶಿಕ್ಷಕಿ ದೇವಕಿ ನಾಯ್ಕ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!