spot_img
Sunday, March 15, 2026
spot_img

ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀವರಮಹಾಲಕ್ಷ್ಮೀ ಪೂಜೆ

ಕುಂದಾಪುರ: ಪುರಾಣ ಪ್ರಸಿದ್ಧ ಶಕ್ತಿಕ್ಷೇತ್ರ ಬಗ್ವಾಡಿಯಲ್ಲಿ ವರಮಹಾಲಕ್ಷ್ಮೀ ವ್ರತ ವಿಜೃಂಭಣೆಯಿಂದ ನಡೆಯಿತು. ಭಕ್ತಾದಿಗಳಿಗೆ ಸಾಮೂಹಿಕವಾಗಿ ಶ್ರೀ ವರಮಹಾಲಕ್ಷ್ಮೀಯ ಪೂಜೆಯ ಅವಕಾಶ ಕಲ್ಪಿಸಲಾಗಿತ್ತು. ಬೆಳಿಗ್ಗೆಯಿಂದಲೇ ವರಮಹಾಲಕ್ಷ್ಮೀ ವ್ರತದ ಸಂಕಲ್ಪ ನಡೆಯಿತು. ಕ್ಷೇತ್ರದ ಪ್ರಧಾನ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು.

ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿದ್ದರು. ಸಾಮೂಹಿಕ ವರಮಹಾಲಕ್ಷ್ಮೀ ಪೂಜೆಯಲ್ಲಿ ಭಕ್ತಾದಿಗಳು ಪಾಲ್ಗೊಂಡರು. ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ೨೫೦೦ಕ್ಕೂ ಹೆಚ್ಚು ಭಕ್ತರು ಅನ್ನಪ್ರಸಾದ ಸೇವಿಸಿದರು.

ಈ ಸಂದರ್ಭದಲ್ಲಿ ಶ್ರೀಮಹಿಷಾಸುರಮರ್ದಿನಿ ದೇವಸ್ಥಾನ ಬಗ್ವಾಡಿ, ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ ೧೯೪೧) ಕುಂದಾಪುರ ಶಾಖೆಯ ಅಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ, ಕಾರ್ಯದರ್ಶಿ ಪ್ರಭಾಕರ ಮೊಗವೀರ ಸೇನಾಪುರ, ಮಾಜಿ ಶಾಖಾಧ್ಯಕ್ಷರುಗಳು, ಪದಾಧಿಕಾರಿಗಳು, ಬಗ್ವಾಡಿ ಹೋಬಳಿ ಮೊಗವೀರ ಸ್ತ್ರೀಶಕ್ತಿ ಅಧ್ಯಕ್ಷರು, ಪದಾಧಿಕಾರಿಗಳು, ಮೊಗವೀರ ಯುವ ಸಂಘಟನೆಯ ಕುಂದಾಪುರ, ಹೆಮ್ಮಾಡಿ, ಹಾಲಾಡಿ, ಬೈಂದೂರು, ಕೋಟೇಶ್ವರ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಸ್ಥಳೀಯ ಗಣ್ಯರು, ದೇವಸ್ಥಾನದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಿಡಿಯೋ

https://www.facebook.com/share/v/1EjXS2dazv/

 

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!