spot_img
Friday, April 3, 2026
spot_img

ಗುರಿ ನಿರ್ಧಾರ ಯಶಸ್ಸಿನ ಮೂಲ-ಜಿ.ಸಿ ರಾವ್

ಶಂಕರನಾರಾಯಣ:ವಿದ್ಯಾರ್ಥಿಗಳು ತಮ್ಮ ಜೀವನದ ಗುರಿಯನ್ನು ಬೇಗ ಕಂಡುಕೊಂಡು, ಅದನ್ನು ಮುಟ್ಟುವ ಸಲುವಾಗಿ ಪರಿಶ್ರಮ, ಬದ್ಧತೆ, ಸಮರ್ಪಣೆಯಂತಹ ವಿವಿಧ ಜೀವನ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ಬೆಂಗಳೂರಿನ ಖ್ಯಾತ ತರಬೇತುದಾರ ಹಾಗೂ ಶೈಕ್ಷಣಿಕ ಮಾರ್ಗದರ್ಶಕ ಜಿ.ಸಿ ರಾವ್ ತಿಳಿಸಿದರು.

ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತರ ಅಧ್ಯಯನ ಕೇಂದ್ರ ಶಂಕರನಾರಾಯಣದ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ವಾಣಿಜ್ಯ ವಿಭಾಗ ಆಯೋಜಿಸಿದ್ದ ವೃತ್ತಿಪರ ಶಿಕ್ಷಣ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಬಿಕಾಂ ಹಾಗೂ ಬಿಬಿ‌ಎ ವಿದ್ಯಾರ್ಥಿಗಳು ಪದವಿ ಹಂತದಲ್ಲಿಯೇ ಇರುವ ಹಲವಾರು ವೃತ್ತಿಪರ ಶಿಕ್ಷಣದ ಅವಕಾಶಗಳನ್ನು ಬಳಸಿಕೊಂಡು ಉನ್ನತ ಮಟ್ಟದ ಉದ್ಯೋಗ ಪಡೆದುಕೊಳ್ಳಬೇಕು. ಲೆಕ್ಕ ಪರಿಶೋಧನೆ, ಕಂಪೆನಿ ಸೆಕ್ರೆಟರಿ ಮತ್ತು ಕಾಸ್ಟ್ ಅಕೌಂಟಿಂಗ್ ಕೋರ್ಸ್‌ಗಳು ಇಂದು ವೃತ್ತಿಪರ ಜೀವನದ ಉನ್ನತ ಅವಕಾಶಗಳಾಗಿವೆ ಎಂದ ಮಾರ್ಗದರ್ಶನ ಮಾಡಿದರು
ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಲ್ಲಿ ಸಿ.ಎ, ಸಿ.ಎಸ್ ಹಾಗೂ ಸಿ.ಎಂ.ಎ ವೃತ್ತಿಗಳಲ್ಲಿ ಇರುವ ಬೇಡಿಕೆಗಳನ್ನು ವಿವರಿಸಿ ವಿದ್ಯಾರ್ಥಿಗಳು ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ಪ್ರೋತ್ಸಾಹಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಸಂಚಾಲಕರು ಹಾಗೂ ನಿರ್ವಹಣಾ ವಿಭಾಗದ ಮುಖ್ಯಸ್ಥ ಡಾ.ವಸಂತ್.ಜಿ ಸ್ವಾಗತಿಸಿದರು.

ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಅಕ್ಷತಾ ಪ್ರಾರ್ಥನೆ ಮಾಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರವೀಣಾ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!