spot_img
Wednesday, November 19, 2025
spot_img

ಎಸ್ ಸಿಡಿಸಿಸಿ ಬ್ಯಾಂಕ್ ಗೆ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ

ಮಂಗಳೂರು:  ಸಹಕಾರಿ ರಂಗದಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಾ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ ಸಿಡಿಸಿಸಿ ಬ್ಯಾಂಕ್)ಗೆ  ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನ ಪ್ರಥಮ ಪ್ರಶಸ್ತಿ ಲಭಿಸಿದೆ. ಅಪೆಕ್ಸ್ ಬ್ಯಾಂಕ್ ರಾಜ್ಯದ ಅತ್ಯುತ್ತಮ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ  ಪ್ರಥಮ ಪ್ರಶಸ್ತಿಯನ್ನು ನೀಡುತ್ತಿದ್ದು ಈ ಪ್ರತಿಷ್ಠಿತ ಪ್ರಶಸ್ತಿಗೆ ಎಸ್ ಸಿಡಿಸಿಸಿ ಬ್ಯಾಂಕ್  ಭಾಜನವಾಗಿದೆ.

ನಿರಂತರ ಸಮಾಜಮುಖಿ ಸೇವೆಗಳೊಂದಿಗೆ ತನ್ನ ಗ್ರಾಹಕರಿಗೆ ಸಂತೃಪ್ತ ಸೇವೆಯನ್ನು ನೀಡುತ್ತಿರುವ ಎಸ್ ಸಿಡಿಸಿಸಿ ಬ್ಯಾಂಕ್  2023-24ನೇ ಸಾಲಿನಲ್ಲಿ ತೋರಿದ ಸಾರ್ವಂಗೀಣ ಪ್ರಗತಿಯೊಂದಿಗೆ ಲೆಕ್ಕ ಪರಿಶೋಧನೆಯಲ್ಲಿ ‘ ಎ ‘ವರ್ಗವನ್ನು  ಪಡೆದು ಪ್ರಥಮ ಪ್ರಶಸ್ತಿಗೆ ಆಯ್ಕೆಗೊಂಡಿರುತ್ತದೆ. ಬ್ಯಾಂಕ್ ವರದಿ ವರ್ಷದಲ್ಲಿ ನೀಡಿದ ಎಲ್ಲಾ ಕೃಷಿ ಸಾಲಗಳು ಶೇಕಡಾ ನೂರು ಮರುಪಾವತಿಯನ್ನು ಕಂಡಿದ್ದು, ಇಂತಹ ಸಾಧನೆಯನ್ನು ಬ್ಯಾಂಕ್ ಕಳೆದ 30 ವರ್ಷಗಳಿಂದ ನಿರಂತರವಾಗಿ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ.

23 ಬಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ 113 ಶಾಖೆಗಳ ಮೂಲಕ ಉತ್ಕೃಷ್ಟ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿರುವ ಎಸ್‌ ಸಿಡಿಸಿಸಿ ಬ್ಯಾಂಕ್‌ ಸಹಕಾರ ರತ್ನ  ಡಾ|ಎಂ.ಎನ್. ರಾಜೇಂದ್ರ ಕುಮಾರ್‌ ಅವರ ನಾಯಕತ್ವದಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದೆ. ಅಭಿವೃದ್ದಿಯ ಪಥದಲ್ಲಿರುವ ಎಸ್ ಸಿಡಿಸಿಸಿ ಬ್ಯಾಂಕ್  ರಾಜ್ಯದ ಅತ್ಯುತ್ತಮ  ಬ್ಯಾಂಕ್’ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿ, ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.  ಅಪೆಕ್ಸ್ ಬ್ಯಾಂಕ್ ನ ಈ ಪ್ರತಿಷ್ಠಿತ  ಪ್ರಶಸ್ತಿಯನ್ನು ಎಸ್ ಸಿಡಿಸಿಸಿ  ಬ್ಯಾಂಕ್ 23ನೇ ಬಾರಿ  ತನ್ನದಾಗಿಸಿಕೊಂಡಿದೆ.

ಸೇವೆಯೇ ಮುಖ್ಯ ಧ್ಯೇಯ : ಗ್ರಾಹಕರ ಸೇವೆಯನ್ನೇ ಮುಖ್ಯ ಧೈಯವನ್ನಾಗಿಟ್ಟುಕೊಂಡು ಯಶಸ್ಸಿನ ಪಥದಲ್ಲಿ ಮುನ್ನಡೆಯನ್ನು ಕಾಣುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕಿಗೆ ವರದಿ ವರ್ಷದಲ್ಲಿ ಕೇಂದ್ರ ಸರಕಾರದ ಅಟಲ್ ಪಿಂಚಣಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ  “ಎಪಿವೈ ರಾಷ್ಟ್ರೀಯ ಪ್ರಶಸ್ತಿ”  ನಾಲ್ಕನೇ ಬಾರಿ ಲಭಿಸಿದೆ.

ದಿನಾಂಕ 13-8-2025ನೇ ಬುಧವಾರದಂದು ಬೆಂಗಳೂರಿನಲ್ಲಿ ನಡೆಯುವ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ರವರು ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಸ್ವೀಕರಿಸಲಿರುವರು ಎಂದು ಬ್ಯಾಂಕಿನ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!