spot_img
Monday, March 16, 2026
spot_img

ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ವಿದ್ಯಾರ್ಥಿಗಳಿಂದ Inclusive  growth ವಿಷಯಧಾರಿತ ಸಾಂಸ್ಕೃತಿಕ ಕಾರ್ಯಕ್ರಮ 

ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ನ  ನಾಲ್ಕನೇ ತರಗತಿಯ ವಿದ್ಯಾರ್ಥಿಗಳಿಂದ ” Inclusive growth ” ಎಂಬ ವಿಷಯಾದರಿತ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮವು ಸಾಮಾಜಿಕ ಶಿಕ್ಷಣದ ಭಾಗವಾಗಿದ್ದು ವಿದ್ಯಾರ್ಥಿಗಳಲ್ಲಿ ದೇಶಭಕ್ತಿಯ ಮನೋಭಾವ ಹಾಗೂ ಸಾಮೂಹಿಕ ಪ್ರಗತಿಯ ಮಹತ್ವವನ್ನು ಅರಿವಿಗೆ ತರುವ ಉದ್ದೇಶವನ್ನು ಹೊಂದಿತ್ತು.
 ಕಾರ್ಯಕ್ರಮದ ವಿಶೇಷ ಅಂಶವೆಂದರೆ ಪುಟಾಣಿಗಳ ಉಜ್ವಲ ಪ್ರದರ್ಶನಗಳು ಗೀತ ಗಾಯನ, ನಾಟಕ,ಭಾಷಣ ಮೊದಲಾದ ವಿವಿಧ ಕಲಾ ರೂಪಗಳ ಮೂಲಕ ಅವರು ತೋರಿದ ಪ್ರತಿಭೆ ಎಲ್ಲರ ಕಣ್ಮನಗಳನ್ನು ಸೆಳೆಯುದರೊಂದಿಗೆ ಮಕ್ಕಳು ದೇಶದ ಬಗ್ಗೆ ಉಳ್ಳ ತಮ್ಮ ಪ್ರೀತಿ ಹಾಗೂ ಗೌರವವನ್ನು ಕಲಾತ್ಮಕವಾಗಿ ವ್ಯಕ್ತಪಡಿಸಿದರು.
 ಕಾರ್ಯಕ್ರಮದಲ್ಲಿ ಆಡಳಿತ ನಿರ್ದೇಶಕರಾದ ಕುಮಾರಿ ಶಮಿತಾ ರಾವ್  ಉಪಸ್ಥಿತರಿದ್ದು  ಮಾತನಾಡಿ ಮಕ್ಕಳ ಪ್ರತಿಭೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.  ” ಇಂತಹ ಕಾರ್ಯಕ್ರಮಗಳು ಮಕ್ಕಳು ಉತ್ತಮ ನಾಗರಿಕರಾಗುವ ದಿಕ್ಕಿನಲ್ಲಿ ಪ್ರೇರಣೆ ನೀಡುತ್ತವೆ. ದೇಶದ ಪ್ರಗತಿಗೆ  ನಾವು ಹೇಗೆ ಕೊಡುಗೆ ನೀಡಬೇಕು ಎಂಬ ಅರಿವು ಅವರಿಗೆ ಈಗಲೇ ಮೂಡಬೇಕು  “ಎನ್ನುತ್ತಾ ರಾಷ್ಟ್ರೀಯ ಚಿಹ್ನೆಗಳನ್ನು ಮಕ್ಕಳು ಗುರುತಿಸಿ ಉಚ್ಚರಿಸುವಂತೆ ಮಾಡಿ ಮಕ್ಕಳಲ್ಲಿ ದೇಶಭಿಮಾನ ಮೂಡಿಸುವ ಸಣ್ಣ ಪ್ರಯತ್ನ ಮಾಡಿದರು.
 ಈ ಕಾರ್ಯಕ್ರಮವು ಮಕ್ಕಳಲ್ಲಿ ನೈತಿಕ ಮೌಲ್ಯಗಳ ಬಿತ್ತನೆ ಮಾಡುವುದಷ್ಟೇ ಅಲ್ಲದೆ ದೇಶ ಸೇವೆಯ ಪ್ರೇರಣೆಯನ್ನು ಗಂಭೀರವಾಗಿ ನೀಡಿದಂತಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!