spot_img
Sunday, March 15, 2026
spot_img

ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿ‌ಅಂಗಡಿಯಲ್ಲಿ 79 ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

ಕುಂದಾಪುರ: ಹಟ್ಟಿ‌ಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಹೊರಾಂಗಣ ವೇದಿಕೆಯಲ್ಲಿ ಧ್ವಜಾರೋಹಣ ಪುರಸ್ಸರವಾಗಿ ವಿಜೃಂಭಣೆಯಿಂದ 79 ನೇ ವರ್ಷದ  ಸ್ವಾತಂತ್ರ್ಯದಿನೋತ್ಸವವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಆಗಮಿಸಿದ ಅತಿಥಿಗಳಾದ ಡಾ. ಅರವಿಂದ ಭಟ್ ಕೆ. ದಂತ ವೈದ್ಯರು ಕಾಟಿಪಳ್ಳ ಮತ್ತು ಶ್ರೀ ಎನ್‌ಎಸ್‌ಆರ್ ವಕೀಲರು, ಕುಂದಾಪುರ ಇವರನ್ನು ಶಾಲೆಯ ವಾದ್ಯಮೇಳದೊಂದಿಗೆ ಸ್ವಾಗತಿಸಲಾಯಿತು. ಅತಿಥಿಗಳು ಧ್ವಜಾರೋಹಣಗೈದು ಧ್ವಜವಂದನೆ ಸಲ್ಲಿಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ ದೇಶಭಕ್ತಿಯ ಘೋಷವಾಕ್ಯಗಳನ್ನು ಬೋಧಿಸಿದರು. ವಿದ್ಯಾರ್ಥಿಗಳು ಪಥಸಂಚಲನದ ಮೂಲಕ ಧ್ವಜವಂದನೆಗೈದರು.

ಡಾ. ಅರವಿಂದ ಭಟ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಶಾಲೆಯು ಉತ್ತಮ ಶಿಸ್ತನ್ನು ಹೊಂದಿದ್ದು, ಆ ಎಲ್ಲಾ ಶಿಸ್ತನ್ನು ಮಕ್ಕಳು ಜೀವನದಲ್ಲಿ ಸದಾ ಮೈಗೂಡಿಸಿಕೊಳ್ಳಬೇಕು. ದೇಶದ ಮುಂದಿನ ಪ್ರಜೆಗಳು ಇಂದಿನ ವಿದ್ಯಾರ್ಥಿಗಳಾದ ನೀವು. ಈ ಎಲ್ಲಾ ಶಿಸ್ತನ್ನು ಮೈಗೂಡಿಸಿಕೊಂಡರೆ ನಮ್ಮ ದೇಶ ಶಿಸ್ತಿನಲ್ಲೂ, ಸಂಯಮದಲ್ಲೂ ಸಾಧನೆಗೈಯ್ಯುವುದರಲ್ಲಿ ಎಳ್ಳಷ್ಟೂ ಸಂದೇಹವಿಲ್ಲ. ನಾವು ಬೇರೆಲ್ಲ ಹಬ್ಬಗಳನ್ನು ನಮ್ಮ ನಮ್ಮ ಮತ ಧರ್ಮಗಳಂತೆ ಆಚರಿಸಿದರೆ, ಈ ಸಂತೋಷವನ್ನು ಎಲ್ಲರೂ ಸೇರಿ ಆಚರಿಸಿಕೊಳ್ಳುತ್ತಿದ್ದೇವೆ. ಇದುವೇ ರಾಷ್ಟ್ರೀಯ ಭಾವೈಕ್ಯತೆಯ ಪ್ರತೀಕವಾಗಿದೆ. ಎಂದರು.

ಎನ್‌ಎಸ್‌ಆರ್ ವಕೀಲರು, ಕುಂದಾಪುರ ಇವರು ಮಾತನಾಡುತ್ತಾ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳ ಫಲವಾಗಿ ಇಂದು ನಾವೆಲ್ಲಾ ಸಂತೋಷ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ನಡೆಸುವಂತಾಗಿದೆ. ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್, ಮಂಗಳ ಪಾಂಡೆ, ಝಾನ್ಸಿರಾಣಿ ಲಕ್ಷ್ಮೀಬಾಯಿ ಇವರೇ ಮೊದಲಾದ ವ್ಯಕ್ತಿಗಳ ಮಾತು ಸದಾ ನಮ್ಮ ಕಿವಿಗಳಲ್ಲಿ ಮೊಳಗುತ್ತಿರಬೇಕು. ಆಲಸ್ಯ, ತಾತ್ಸಾರ, ದುಷ್ಟಚಟಗಳಿಂದ ಮುಕ್ತರಾಗಿ, ದೇಶದ ಅಭಿವೃದ್ಧಿಯ ಕಡೆಗೆ ಸದಾ ಗಮನಿಸಬೇಕು. ವಿದ್ಯಾರ್ಥಿಗಳಾದ ನೀವು ಸದಾ ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು. ಅವಕಾಶ ಸಿಕ್ಕಾಗ ಬೇರೆಯವರಿಗೆ ಸಹಾಯ ಮಾಡುತ್ತಿರಬೇಕು. ನಿಮ್ಮ ವಾತಾವರಣವನ್ನು ಶುದ್ಧವಾಗಿರಿಸಿಕೊಳ್ಳಬೇಕು. ಸತ್ಯವಾದ ನುಡಿ, ಪ್ರಾಮಾಣಿಕತೆ, ಸ್ವಾಭಿಮಾನ ನಿಮ್ಮ ಉಸಿರಾಗಿರಬೇಕು. ಎಂದರು.

ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಮತ್ತು ಶಾಲಾ ಪ್ರಾಂಶುಪಾಲರಾದ  ಶರಣ ಕುಮಾರರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಲಾ ಆಡಳಿತಾಧಿಕಾರಿ ವೀಣಾರಶ್ಮಿ ಎಮ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲೆಯ ಉಪಪ್ರಾಂಶುಪಾಲರಾದ ರಾಮ ದೇವಾಡಿಗ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಜಾತಾ ಸದಾರಾಮ್ ಮತ್ತು ಶಿಕ್ಷಕ ಶಿಕ್ಷಕೇತರ ವೃಂದ, ವಿದ್ಯಾರ್ಥಿವೃಂದದವರು ಸಡಗರದಿಂದ ಭಾಗವಹಿಸಿದ್ದರು. ವಿದ್ಯಾರ್ಥಿ ಚಿನ್ಮಯ್ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿನಿ ವೈಷ್ಣವೀ  ಸ್ವಾಗತಿಸಿದರೆ, ವಿದ್ಯಾರ್ಥಿ ಪ್ರದ್ಯುಮ್ನ ವಿ.ಕೆ ಧನ್ಯವಾದವನ್ನು ಸಮರ್ಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!