spot_img
Wednesday, May 20, 2026
spot_img

ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೆಯ ಸ್ವಾತಂತ್ರ್ಯ ದಿನಾಚರಣೆ

ಕುಂದಾಪುರ: ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೆಯ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳು ಭಾರತ ನಕ್ಷೆ ಆಕಾರದಲ್ಲಿ ನಿಂತು ಕೇಸರಿ,ಬಿಳಿ, ಹಸಿರು ಬಣ್ಣದ ವಸ್ತ್ರಧಾರಣೆಯ ಮೂಲಕ ದೇಶಭಕ್ತಿ ಸಂದೇಶವನ್ನು ಸಾರಿದರು.

ಧ್ವಜಾರೋಹಣವನ್ನು ಬಸ್ರೂರು ಗ್ರಾಮದ ನಿವೃತ್ತ ಸೈನಿಕರಾದ ದೀಪಕ್ ಕುಮಾರ್ ನೆರವೇರಿಸಿದರು.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಶಭಕ್ತಿ ಗೀತೆ ನೃತ್ಯ ಮತ್ತು ಭಾಷಣಗಳ ಮೂಲಕ ಸ್ವಾತಂತ್ರ್ಯದ ಮಹತ್ವವನ್ನು ಬಿಂಬಿಸಿದರು.

ಈ ಸಂದರ್ಭದಲ್ಲಿ ನಿವೃತ್ತ ಸೈನಿಕರಾದ ದೀಪಕ್ ಕುಮಾರ್, ಬಸ್ರೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬೇಳೂರು ದಿನಕರ್ ಶೆಟ್ಟಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಶಾಲಾ ಸಂಚಾಲಕ ಸಂತೋಷ್ ಶೆಟ್ಟಿ ಮಾತನಾಡಿ, ಶಿಕ್ಷಕರಿಗೆ ಎಷ್ಟು ಗೌರವವಿದೆಯೋ ಅಷ್ಟೇ ಗೌರವ ಸೈನ್ಯಕ್ಕೂ ಇದೆ. ಹಾಗೆಯೇ ನಮಗೆ ಸ್ವಾತಂತ್ರ್ಯ ೧೯೪೭ ಅಗಸ್ಟ್ ೧೫ರಂದೇ ಏಕೆ ದೊರೆಯಿತು. ಎನ್ನುವುದರ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಅಧಿಕಾರಿ ಆಶಾ ಶೆಟ್ಟಿ ಹಾಗೂ ಶಿಕ್ಷಕ, ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ರೇಷ್ಮಾ ಅಡಪ ಸ್ವಾಗತಿಸಿ, ಸಹ ಶಿಕ್ಷಕಿ ಸವಿತಾ ಕಾರ್ಯಕ್ರಮ ನಿರೂಪಿಸಿ, ಶ್ವೇತಾ ವಂದಿಸಿದರು.

 

 

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!