spot_img
Friday, April 3, 2026
spot_img

ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್: 79ನೇ ಸ್ವಾತಂತ್ರ್ಯ ದಿನಾಚರಣೆ

ತೆಕ್ಕಟ್ಟೆ: ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ತೆಕ್ಕಟ್ಟೆಯಲ್ಲಿ ಆಗಸ್ಟ್ 15 ಸ್ವಾತಂತ್ರ್ಯ ದಿನದ ಪ್ರಯುಕ್ತ ಧ್ವಜಾರೋಹಣ ಕಾರ್‍ಯಕ್ರಮವನ್ನು ನೆರವೇರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಸೇನಾನಿ ಸೀತಾರಾಮ ಶೆಟ್ಟಿಯವರು ಧ್ವಜಾರೋಹಣ ಕಾರ್‍ಯಕ್ರಮ ನೆರವೇರಿಸಿ 79ನೇ ಸ್ವಾತಂತ್ರ್ಯ ದಿನದ ಶುಭಾಶಯಗಳನ್ನು ಕೋರಿದರು. ಪಾಶ್ಚ್ಯಾತ್ಯ ಸಂಸ್ಕೃತಿಗೆ ಮಾರು ಹೋಗದೆ ಭಾರತೀಯ ಸಂಸ್ಕಾರಯುತ ಸಂಸ್ಕೃತಿಯನ್ನು ಪ್ರತಿಯೊಬ್ಬರು ಬೆಳೆಸಿ ಕೊಳ್ಳಬೇಕು. ವಿದ್ಯಾರ್ಥಿಗಳು ತಾವು ಕಲಿತ ಶಾಲೆ ಹಾಗೂ ಗುರು ಭಕ್ತಿಯನ್ನು ಎಂದಿಗೂ ಮರೆಯಬಾರದು ಎಂದು ಕಿವಿ ಮಾತು ಹೇಳಿದರು. ಸಭಾದ್ಯಕ್ಷತೆ ವಹಿಸಿದ ಶಾಲಾ ಮ್ಯಾನೆಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿರವರು ಮಾತನಾಡಿ ಸ್ವಾತಂತ್ರ್ಯ ಯೋಧರ ತ್ಯಾಗ ಬಲಿದಾನಗಳನ್ನು ಸ್ಮರಿಸಿ ಸರ್ವರಿಗೂ ಸ್ವಾತಂತ್ರ್ಯೋತ್ಸವದ ಶುಭಾಷಯಗಳನ್ನು ಕೋರಿದರು.

ಶಾಲಾ ಪ್ರಾಂಶುಪಾಲರಾದ ನಿತಿನ್ ಡಿ ಆಲ್ಮೇಡಾರವರು ಮಾತನಾಡಿ ಸ್ವತಂತ್ರ ಭಾರತದಲ್ಲಿ ಸರ್ವಜನಾಂಗದವರು ಏಕತಾ ಮನೋಭಾವದಿಂದ ದೇಶದ ಒಳಿತಿಗೆ ಶೃಮಿಸಿ ದೇಶ ಕಟ್ಟುವ ಕೆಲಸವಾಗ ಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು, ವಿದಾರ್ಥಿಗಳು, ಪೋಷಕರು, ಹಳೆ ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಯವರು ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ನೆರವೇರಿಸಿದರು. ವಿದ್ಯಾರ್ಥಿಗಳಾದ ವೈಷ್ಣವಿ ಸ್ವಾಗತಿಸಿ ಪರಿಚಯಿಸಿದರು, ಆಯುಷ್ ಕೆ.ಎಸ್ ಕಾರ್‍ಯಕ್ರಮ ನಿರೂಪಿಸಿದರು, ನಿದರ್ಸನ ವಂದಿಸಿದರು, ಶಿಕ್ಷಕಿಯರಾದ ಸ್ಮಿತಾ ನಾಯ್ಕ್, ಅನುಷಾ ಹಾಗೂ ಅಕ್ಷಯ ಶೆಟ್ಟಿ ಕಾರ್ಯಕ್ರಮ ಸಂಘಟಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!