spot_img
Wednesday, April 1, 2026
spot_img

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನೂಜಾಡಿ-2 ಬಗ್ವಾಡಿ: 79ನೇ ಸ್ವಾತಂತ್ರ್ಯೋತ್ಸವ

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನೂಜಾಡಿ-2 ಬಗ್ವಾಡಿ ಇಲ್ಲಿ ನಡೆದ 79ನೆಯ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಧ್ವಜಾರೋಹಣವನ್ನು ಎಸ್ಡಿ‌ಎಂಸಿ ಅಧ್ಯಕ್ಷರಾದ ರಾಧಾಕೃಷ್ಣ ಗಾಣಿಗ ನೆರವೇರಿಸಿದರು.

ನಂತರ ಮಕ್ಕಳು ಪುರ ಮೆರವಣಿಗೆಯೊಂದಿಗೆ ಸಂಭ್ರಮಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಧಾಕೃಷ್ಣ ಗಾಣಿಗ ವಹಿಸಿದ್ದರು. ಸಭೆಯಲ್ಲಿ ಶತಮಾನೋತ್ಸವ ಸಮಿತಿಯ ಅಧ್ಯಕ್ಷರು ಹಿರಿಯ ನಿವೃತ್ತ ಐ‌ಎ‌ಎಸ್ ಅಧಿಕಾರಿ ಬಿ ಎನ್ ಶೆಟ್ಟಿ, ಹಿರಿಯ ಪುರೋಹಿತರಾದ ನಾಗಪ್ಪಯ್ಯ ಭಟ್, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ಬಿ ರಾಜೀವ ಶೆಟ್ಟಿ, ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಪಂಚಾಯತ್ ಸದಸ್ಯ ಅಶೋಕ್ ಪೂಜಾರಿ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯನಿ ಶೈಲಜಾ ಶೆಟ್ಟಿ ಪ್ರಾಸ್ತಾವಿಕ ನುಡಿಗಳೊಂದಿಗೆ ದಿನದ ಮಹತ್ವದ ಬಗ್ಗೆ ವಿವರಿಸಿದರು. ಬಿ.ಎನ್ ಶೆಟ್ಟಿಯವರು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಗಣ್ಯರನ್ನು ನೆನಪಿಸುತ್ತ ಇಂದಿನ ಪ್ರಜೆಗಳಾದ ನಾವು ಸ್ವಾತಂತ್ರ್ಯವನ್ನು ರಕ್ಷಣೆ ಮಾಡುವುದು ಹೇಗೆ ಮತ್ತು ಪ್ರಜೆಗಳ ಕರ್ತವ್ಯವೇನು ಎಂಬುದನ್ನು ತಿಳಿಸಿದರು.

ಗೌರವ ಶಿಕ್ಷಕಿ ಚೈತ್ರ ಸ್ವಾಗತಿಸಿ, ಹರ್ಷಿತ ವಂದಿಸಿದರು. ಸಹ ಶಿಕ್ಷಕಿ ಪೂರ್ಣಿಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಸತ್ಯವತಿ ,ಶ್ವೇತ, ರೇಷ್ಮಾ ಸಹಕರಿಸಿದರು. ನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!