spot_img
Wednesday, April 1, 2026
spot_img

ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ವಂಡ್ಸೆ, ಆ.15: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಗ್ರಾಮ ಪಂಚಾಯತ್ ಅದ್ಯಕ್ಷೆ ಗೀತಾ ಅವಿನಾಶ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗೋವರ್ದನ್ ಜೋಗಿ, ಗ್ರಾಮ ಪಂಚಾಯತ್ ಸದಸ್ಯ, ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ವಂಡ್ಸೆ, ಗ್ರಾಮ ಪಂಚಾಯತ್ ಸದಸ್ಯರಾದ ಶಶಿಕಲಾ ಎಸ್.ವಂಡ್ಸೆ, ಸುಬ್ಬು, ಸುಶೀಲಾ, ವಂಡ್ಸೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಮಹಮ್ಮದ್ ರಫೀಕ್ ಸಾಹೇಬ್, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಎಸ್.ಡಿ.ಎಂ.ಸಿ ಪದಾಧಿಕಾರಿಗಳು, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವಿ.ಕೆ ಶಿವರಾಮ ಶೆಟ್ಟಿ, ಶಾಲಾ ಪ್ರಭಾರ ಮುಖ್ಯಶಿಕ್ಷಕರಾದ ಸೋಮರಾಯ ಜನ್ನು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಶಿಕ್ಷಕ ವೃಂದದವರು, ಎಸ್.ಡಿ.ಎಂ.ಸಿ ಮಾಜಿ ಸದಸ್ಯರು ಉಪಸ್ಥಿತರಿದ್ದರು.

ಶಾಲಾ ಪ್ರಭಾರ ಮುಖ್ಯಶಿಕ್ಷಕರಾದ ಸೋಮರಾಯ ಜನ್ನು ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ರಾಜು ಎನ್ ವಂದಿಸಿದರು. ಬಳಿಕ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ, ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!