spot_img
Saturday, March 21, 2026
spot_img

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುವಾಲ್ತೂರು: 79ನೇ ಸ್ವಾತಂತ್ರ್ಯ ದಿನಾಚರಣೆ

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುವಾಲ್ತೂರು ಇಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸಂತೋಷ ಜಿ ಶೇಟ್ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುರೇಶ್ ಶೆಟ್ಟಿ ಕೊಕ್ಕೋಡು, ಗ್ರಾಮ ಪಂಚಾಯತ್ ಸದಸ್ಯರಾದ ಪ್ರಕಾಶ್ಚಂದ್ರ ಶೆಟ್ಟಿ ಜೋರ್ಮಕ್ಕಿ, ಶ್ಯಾಮಲ ದೇವಾಡಿಗ,ಶ್ಯಾಮಲ ನರ್ಸರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸಂದೇಶ ಕುಮಾರ್ ಶೆಟ್ಟಿ ಮುಂಬಾರು, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ವೀಣಾ ತಪ್ಪಲು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ೨೦೨೪-೨೫ನೇ ಸಾಲಿನಲ್ಲಿ ನಮ್ಮ ಶಾಲೆಯಿಂದ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕ ವಿದ್ಯಾರ್ಥಿವೇತನ ದಾನಿಗಳ ಸಹಾಯ ದಿಂದ ನೀಡಲಾಯಿತು. ನಮ್ಮ ಶಾಲೆಯಲ್ಲಿ ಈ ಹಿಂದೆ ಕಲಿತು ೨೦೨೪-೨೫ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಗೌರವ ಸ್ಮರಣಿಕೆ ನೀಡುವುದರ ಮೂಲಕ ಪ್ರತಿಭಾ ಪುರಸ್ಕಾರ ನಡೆಯಿತು. ಲಯನ್ಸ್ ಕ್ಲಬ್ ಹಂಗಳೂರು ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಕ್ರೀಡಾ ಸಮವಸ್ತ್ರ ವಿತರಣಾ ಕಾರ್ಯಕ್ರಮ ನಡೆಯಿತು. ತಾಯಿ ಹೆಸರಲ್ಲಿ ಗಿಡ ನೆಟ್ಟ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.

ಮುಖ್ಯ ಶಿಕ್ಷಕರಾದ ಐವನ್ ಸಂತೋಷ ಸಾಲಿನ್ಸ್ ಸ್ವಾಗತಿಸಿ, ಸಹ ಶಿಕ್ಷಕ ಎಚ್. ಪ್ರಭಾಕರ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಸಹ ಶಿಕ್ಷಕಿರಾದ ಸುಶೀಲಾ ಮಡಿವಾಳ, ಲವಿನಾ ಹಾಗೂ ಅಶ್ವಿನಿ ಸಹಕರಿಸಿದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!