spot_img
Sunday, March 15, 2026
spot_img

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕ: ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೈನಿಕರಿಗೆ ಗೌರವಾರ್ಪಣೆ

ಹೆಮ್ಮಾಡಿ: ಮೊಗವೀರ ಯುವ ಸಂಘಟನೆಯ [ರಿ.] ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ಹಾಗೂ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.), ಉಡುಪಿ, ಅಂಬಲಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ 79ನೇ ಸ್ವಾತಂತ್ರೋತ್ಸವ ಸಂಭ್ರಮದ ಪ್ರಯುಕ್ತ ಹಮ್ಮಿಕೊಂಡ “ಸೈನಿಕರಿಗೊಂದು ಗೌರವಾರ್ಪಣೆ” ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ನಿವೃತ್ತ ಯೋಧ ಮೋಹನ ದಾಸ ಶೆಟ್ಟಿ ದಂಪತಿಗಳನ್ನು ಇವರ ಸ್ವಗ್ರಹದಲ್ಲಿ ಅಗಸ್ಟ್ ೧೫ ರಂದು ಸನ್ಮಾನಿಸಿ ಗೌರವಿಸಲಾಯಿತು.

ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಕಾಂಚನ್ ಬಾಳಿಕೆರೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಹಿರಿಯರಾದ ಡಾ.ಅತುಲ್ ಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಚಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿರಾಜ ಶೆಟ್ಟಿ, ಹೆಮ್ಮಾಡಿ ಘಟಕದ ಗೌರವಾಧ್ಯಕ್ಷರಾದ ಲೋಹಿತಾಶ್ವ ಆರ್. ಕುಂದರ್, ಮಾಜಿ ಅಧ್ಯಕ್ಷರಾದ ರಾಘವೇಂದ್ರ ನೆಂಪು, ಚಿತ್ತೂರು ಪಂಚಾಯತ್ ಸದಸ್ಯರಾದ ಚಂದ್ರ ಶೆಟ್ಟಿ, ರಘುರಾಮಶೆಟ್ಟಿ ಚಿತ್ತೂರು, ನಾರಾಯಣ ಶೆಟ್ಟಿ, ಹೆಮ್ಮಾಡಿ ಘಟಕದ ಕಾರ್ಯದರ್ಶಿಯಾದ ಜಗದೀಶ ನೆಂಪು, ಕಟ್ ಬೆಲ್ತೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ನಾಗರಾಜ ಪುತ್ರನ್, ಸ್ತ್ರೀಶಕ್ತಿ ಬಗ್ವಾಡಿ ಹೋಬಳಿ ಇದರ ಅಧ್ಯಕ್ಷರಾದ ಶ್ಯಾಮಲಾ ಜಿ. ಚಂದನ್ ಹಾಗೂ ಮೊಗವೀರ ಯುವ ಸಂಘಟನೆ (ರಿ.),ಹೆಮ್ಮಾಡಿ ಘಟಕದ ಪದಾಧಿಕಾರಿಗಳು ಮತ್ತು ನೆಂಪು ಫ್ರೆಂಡ್ಸ್ ಇದರ ಸದಸ್ಯರು ಉಪಸ್ಥಿತರಿದ್ದರು.
ಹೆಮ್ಮಾಡಿ ಘಟಕದ ಉಪಾಧ್ಯಕ್ಷರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!