spot_img
Sunday, March 15, 2026
spot_img

ಹುಣ್ಸೆಮಕ್ಕಿ: ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಆರಂಭ

ಜನಪ್ರತಿನಿಧಿ ವಾರ್ತೆ] ಕುಂದಾಪುರ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಂದಿನಿ ಉತ್ಪನ್ನಗಳು ಎಲ್ಲ ಜನರ ವಿಶ್ವಾಸವನ್ನು ಗಳಿಸಿದೆ. ನಂದಿನಿ ಎಂದರೆ ಗೋವಿನಿಂದ ಗ್ರಾಹಕರ ವರೆಗೆ ಪ್ರತಿ ಹಂತದಲ್ಲೂ ಕೂಡ ಕಾರ್ಯನಿರ್ವಹಿಸುತ್ತಿದೆ ಎಂದು ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆ ಕೊಡವೂರು ಹೇಳಿದರು.

ಅವರು ಹುಣ್ಸೆಮಕ್ಕಿ ಅನಾಧಿ ಆರ್ಟಿಸೆನ್ಸ್ ಪ್ರೈ.ಲಿ ಇವರ ಏಜೆನ್ಸಿಯ ನಂದಿನಿ ಉತ್ಪನ್ನ ಮಾರಾಟ ಮಳಿಗೆಯನ್ನು ಉದ್ಘಾಟಿಸಿ ಮಾತನಾಡುತ್ತಾ ಒಕ್ಕೂಟದ ಹಿರಿಯ ನಿರ್ದೇಶಕರಾದ ಎನ್.ಮಂಜಯ್ಯ ಶೆಟ್ಟಿ ಸಬ್ಲಾಡಿ ಮತ್ತು ಶ್ರೀಮತಿ ವಸಂತಿ ಎಂ.ಶೆಟ್ಟಿಯವರ ಶ್ರಮ ಮಾದರಿಯಾದುದು. ಕೃಷಿ, ಹೈನುಗಾರಿಕಾ ಕ್ಷೇತ್ರದಲ್ಲಿ ಈ ದಂಪತಿಗಳ ಕೊಡುಗೆ ಬಹಳ ಮುಖ್ಯವಾಗಿದೆ ಎಂದರು.

ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಉದಯ ಎಸ್.ಕೋಟ್ಯಾನ್, ನಿರ್ದೇಶಕರಾದ ಬೆಳಪು ದೇವಿಪ್ರಸಾದ್ ಶೆಟ್ಟಿ, ಎಸ್.ಪ್ರಕಾಶ್ಚಂದ್ರ ಶೆಟ್ಟಿ,ಮಮತಾ ಆರ್.ಆರ್.ಶೆಟ್ಟಿ, ಮುಡಾರು ಸುಧಾಕರ ಶೆಟ್ಟಿ, ಒಕ್ಕೂಟದ ಆಡಳಿತ ನಿರ್ದೇಶಕ ವಿವೇಕ್ ಡಿ., ಮಾರುಕಟ್ಟೆ ವಿಭಾಗದ ಉಪ ವ್ಯವಸ್ಥಾಪಕ ಸುಧಾಕರ, ಒಕ್ಕೂಟದ ಮಾಜಿ ಅಧ್ಯಕ್ಷ ಶೇಡಿಕೊಡ್ಲು ವಿಠಲ ಶೆಟ್ಟಿ, ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಮಾಜಿ ಅಧ್ಯಕ್ಷರಾದ ಎಂ.ಜಯಶೀಲ ಶೆಟ್ಟಿ, ಒಕ್ಕೂಟದ ಮಾಜಿ ನಿರ್ದೇಶಕರಾದ ಬಾಂಡ್ಯ ಸುಬ್ಬಣ್ಣ ಶೆಟ್ಟಿ, ಯಡಾಡಿ ಮತ್ಯಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಂತಿ, ಉಪಾಧ್ಯಕ್ಷರಾದ ಅರುಣ್ ಕುಮಾರ್ ಹೆಗ್ಡೆ, ಉದ್ಯಮಿ ಬಾಂಡ್ಯ ಸುಭಾಸ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಒಕ್ಕೂಟದ ನಿರ್ದೇಶಕರಾದ ಎನ್.ಮಂಜಯ್ಯ ಶೆಟ್ಟಿ ಸಬ್ಲಾಡಿ ಸ್ವಾಗತಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!