spot_img
Monday, March 16, 2026
spot_img

ಶಿಕ್ಷಣದ ಜೊತೆಗೆ ಮಕ್ಕಳಿಗೆ ಕ್ರೀಡೆಗೆ ಹೆಚ್ಚು ಒತ್ತು ಕೊಡಬೇಕು-ರಿಷಭ್ ಶೆಟ್ಟಿ

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆರಾಡಿ ಇಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿಶೇಷವಾಗಿ ‘ಕಾಂತಾರ’ ಖ್ಯಾತಿಯ ಚಿತ್ರನಟ, ನಿರ್ದೇಶಕ ರಿಷಬ್ ಶೆಟ್ಟಿಯವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರ ಪತ್ನಿ ಪ್ರಗತಿ ಶೆಟ್ಟಿ ಹಾಗೂ ಮಕ್ಕಳು ಆಗಮಿಸಿ ಸ್ವಾತಂತ್ರ್ಯೋತ್ಸವ ಸಡಗರದಲ್ಲಿ ಭಾಗಿಯಾದರು.

ಈ ಸಂದರ್ಭದಲ್ಲಿ ಮಾತನಾಡಿದ ರಿಷಭ್ ಶೆಟ್ಟಿ ಅವರು, ಶಿಕ್ಷಣದ ಜೊತೆಗೆ ಮಕ್ಕಳಿಗೆ ಕ್ರೀಡೆಗೆ ಹೆಚ್ಚು ಒತ್ತು ಕೊಡಬೇಕು. ನಮ್ಮೂರಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ಸಹಕರಿಸುತ್ತೇವೆ ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸತೀಶ್ ಕೊಠಾರಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕೆ.ಡಿ.ಪಿ ಸದಸ್ಯರಾದ ಪ್ರಸನ್ನ ಕುಮಾರ್ ಶೆಟ್ಟಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುದರ್ಶನ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅಜಿತ್ ಶೆಟ್ಟಿ ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯರಾದ ಭಾಸ್ಕರ್ ಶೆಟ್ಟಿ ಸ್ವಾಗತಿಸಿದರು. ಗೌರವ ಶಿಕ್ಷಕಿ ಕುಸುಮ ವಂದಿಸಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು, ಪೋಷಕರು, ಹಳೆ ವಿದ್ಯಾರ್ಥಿಗಳು ಮತ್ತು ಶಿಕ್ಷಕವೃಂದ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!