spot_img
Wednesday, April 1, 2026
spot_img

ಕೋಟೇಶ್ವರ ಸರಕಾರಿ ಪದವಿ ಕಾಲೇಜು ಬಿ.ಕಾಂ. ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ

ಕೋಟೇಶ್ವರ: ಕೋಟೇಶ್ವರದ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾsಗದಿಂದ ಅಂತಿಮ ಬಿ.ಕಾಂ. ವಿದ್ಯಾರ್ಥಿಗಳಿಗೆ ಸಿ.ಎಮ್.ಎ. (Cost and Management Accounting) ಕೋರ್ಸ್‌ನ ಮಹತ್ವದ ಕುರಿತು ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಯಿತು.

ಉದ್ಯೋಗಕ್ಕಾಗಿ ಪೈಪೋಟಿ ಎದುರಿಸುತ್ತಿರುವ ಈ ಕಾಲಘಟ್ಟದಲ್ಲಿ ಕೇವಲ ಸರಕಾರಿ ಉದ್ಯೋಗಕ್ಕಾಗಿ ಕಾಯದೇ ವೃತ್ತಿಪರ ಕೋರ್ಸ್ ಆದ ಕೋಸ್ಟ್ ಎಂಡ್ ಮ್ಯಾನೇಜ್‌ಮೆಂಟ್ ಅಕೌಂಟಿಂಗ್‌ನತ್ತ ಗಮನ ಹರಿಸಿದರೆ ಉತ್ತಮ ಸಂಪಾದನೆ ಜೊತೆಗೆ ಸಮಾಜದಲ್ಲಿ ಒಳ್ಳೆಯ ಸ್ಥಾನಮಾನವನ್ನು ಗಳಿಸಬಹುದು ಎಂದು ಜಿ.ಸಿ, ರಾವ್ ಅಕಾಡೆಮಿ ಬೆಂಗಳೂರು ಇದರ ಮುಖ್ಯಸ್ಥರಾದ  ಸಿ.ಎ, ಸಿ.ಎಮ್‌ಎ, ಜಿ.ಸಿ. ರಾವ್ ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕಿವಿ ಮಾತನ್ನಾಡಿದರು. ಇನ್ನೋರ್ವ ಅತಿಥಿ  ನರೇಶ್, ಅಧ್ಯಾಪಕರು ಜಿ.ಸಿ. ರಾವ್ ಅಕಾಡೆಮಿ ಬೆಂಗಳೂರು ಇವರು ಕಠಿಣ ಪರಿಶ್ರಮದಿಂದ ಸಿ‌ಎಮ್‌ಎ ಕೋರ್ಸ್‌ನ್ನು ಸುಲಭವಾಗಿ ತೇರ್ಗಡೆಗೊಳ್ಳಬಹುದು ಎಂದು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ರವರು ವಹಿಸಿದರು.  ನಾಗರಾಜ ಯು. ಐಕ್ಯೂ‌ಎಸಿ ಸಂಚಾಲಕರು, ನಾಗರಾಜ ವೈದ್ಯ ಎಂ. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಶೇಖರ ಬಿ. ರವರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿ ಪ್ರತಿನಿಧಿಗಳಾದ  ಭೂಮಿಕಾ ಹಾಗೂ ಸುದೀಪ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು

 

 

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!