spot_img
Saturday, February 14, 2026
spot_img

ಹೆಸಕುತ್ತೂರು ಪ್ರಾಥಮಿಕ ಶಾಲೆ: ದ್ವಿಭಾಷಾ ಮಾಧ್ಯಮ ಉದ್ಘಾಟನೆ

ಕುಂದಾಪುರ: “ಇಂಗ್ಲಿಷ್ ಲ್ಯಾಂಗ್ವೇಜ್ ಲ್ಯಾಬ್, ಸ್ಪೋಕನ್ ಇಂಗ್ಲಿಷ್ ತರಗತಿಗಳ ಮೂಲಕ ಗುಣಮಟ್ಟದ ಇಂಗ್ಲಿಷ್ ಶಿಕ್ಷಣ ನೀಡುತ್ತಿರುವ ಹೆಸಕುತ್ತೂರು ಪ್ರಾಥಮಿಕ ಶಾಲೆಯು ದ್ವಿಭಾಷಾ ಮಾಧ್ಯಮ ಆರಂಭಿಸುವ ಮೂಲಕ ಇನ್ನಷ್ಟು ಉತ್ತಮ ಶೈಕ್ಷಣಿಕ ಸಾಧನೆ ಮಾಡುವಂತಾಗಲಿ” ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ಚಂದ್ರಶೇಖರ ಶೆಟ್ಟಿ ಕೆ ಎನ್, ಹೇಳಿದರು.

ಅವರು ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಶೈಕ್ಷಣಿಕ ವರ್ಷದಿಂದ ಆರಂಭಿಸಲಾಗಿರುವ ದ್ವಿಭಾಷಾ ಮಾಧ್ಯಮ (ಆಂಗ್ಲ ಮಾಧ್ಯಮ) ವಿಭಾಗವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸುಧಾಕರ ಕುಲಾಲ ವಹಿಸಿದ್ದರು. ಕೊರ್ಗಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪಲ್ಲವಿ ಕುಲಾಲ, ಗ್ರಾಮ ಪಂಚಾಯತ್ ಸದಸ್ಯರಾದ ರಾಘವೇಂದ್ರ ಶೆಟ್ಟಿ, ಉದ್ಯಮಿಗಳಾದ ಗಣೇಶ ಪ್ರಸಾದ ಕಾಂಚನ್ ಶಿರಿಯಾರ, ನಿವೃತ್ತ ಪೋಸ್ಟ್ ಮಾಸ್ಟರ್ ಶಂಕರ ಶೆಟ್ಟಿ ಕೆ.ಎನ್, ಕೊರ್ಗಿ ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ರೋಶನಿ ಪೂಂಜಾ, ಮೆಸ್ಕಾಂ ಕಿರಿಯ ಅಭಿಯಂತರರಾದ ವೈಭವ ಶೆಟ್ಟಿ, ಉದಯ ಭಂಡಾರಿ, ನಿವೃತ್ತ ಶಿಕ್ಷಕಿ ಜಯಲಕ್ಷ್ಮಿ ಬಿ. ಶಾಲಾ ಶಿಕ್ಷಕರಾದ ಸಂಜೀವ ಎಂ, ವಿಜಯಾ ಆರ್, ವಿಜಯ ಶೆಟ್ಟಿ, ಸ್ವಾತಿ ಬಿ, ಅತಿಥಿ ಶಿಕ್ಷಕಿ ಪವಿತ್ರಾ, ಗೌರವ ಶಿಕ್ಷಕಿ ಮಧುರಾ, ಹಾಗೂ ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ್ ಸ್ವಾಗತಿಸಿದರು. ಸಹ ಶಿಕ್ಷಕರಾದ ಅಶೋಕ ತೆಕ್ಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ರವೀಂದ್ರ ನಾಯಕ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!