spot_img
Wednesday, April 1, 2026
spot_img

ಆತ್ಮಸ್ಥೈರ್ಯ ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳಿ – ಈಶ್ವರ್ ಮಲ್ಪೆ

ಕುಂದಾಪುರ: ಬದುಕಿನಲ್ಲಿ ಕಠಿಣ ಸವಾಲುಗಳು ಎದುರಾದಾಗ ಅದನ್ನು ಎದುರಿಸಲು ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕು, ಜೊತೆಗೆ ಪರೋಪಕಾರ ಹಾಗೂ ಸೇವಾ ಮನೋಭಾವವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ಸಮಾಜ ಸೇವಕ ಹಾಗೂ ಮುಳುಗು ತಜ್ಞರಾದ ಈಶ್ವರ್ ಮಲ್ಪೆ ಹೇಳಿದರು.

ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಹಮ್ಮಿಕೊಂಡ ಸಾಮಾಜಿಕ ಜವಾಬ್ದಾರಿ ಎನ್ನುವ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೊವಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ನಂದಾ ರೈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಹಪ್ರಾಧ್ಯಾಪಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ವಂದಿಸಿದರು. ಬಿ.ಬಿ.ಎ. ವಿದ್ಯಾರ್ಥಿಗಳಾದ ಸುಹಾಸ್ ಮಲ್ಯ ಪ್ರಾರ್ಥಿಸಿದರು, ಐಶ್ವರ್ಯ ಸ್ವಾಗತಿಸಿದರು. ರಶ್ಮಿತಾ ಸಂಪನ್ಮೂಲ ವ್ಯಕ್ತಿಯ ಪರಿಚಯಿಸಿದರು, ಶ್ರೀರಕ್ಷಾ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!