spot_img
Wednesday, April 1, 2026
spot_img

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಆ.21ರಂದು ಕುಂದಾಪುರದಲ್ಲಿ ಜನಾಗ್ರಹ ಸಭೆ ಮತ್ತು ಜಾಥ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಮತ್ತು ಅವಹೇಳನವನ್ನು ಖಂಡಿಸುವ ಸಲುವಾಗಿ ಕುಂದಾಪುರದಲ್ಲಿ ಧರ್ಮಾತೀತವಾಗಿ, ಜಾತ್ಯಾತೀತವಾಗಿ ಮತ್ತು ಪಕ್ಷಾತೀತವಾಗಿ ಆಗಸ್ಟ್ 21 ಗುರುವಾರ ಬೆಳಿಗ್ಗೆ 10 ಗಂಟೆಗೆ ಕುಂದಾಪುರದ ಶಾಸ್ತ್ರೀವೃತ್ತದಲ್ಲಿ ಸಭೆ ಸೇರಲಿದ್ದು, ಸರ್ಕಾರಕ್ಕೆ ಸ್ವಯಂ ಪ್ರೇರಿತವಾಗಿ ಅಪಪ್ರಚಾರ ಮಾಡುವವರ ಮತ್ತು ಅವಹೇಳನ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆ ಕುಂದಾಪುರ ತಾಲೂಕು ವತಿಯಿಂದ ಜನಾಗ್ರಹ ಸಭೆ ಮತ್ತು ಜಾಥದ ಮೂಲಕ ತಹಶೀಲ್ದಾರರಿಗೆ ಮನವಿ ಮಾಡಲಾಗುವುದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆಯ ಕುಂದಾಪುರ ತಾಲೂಕು ಇದರ ಸುಬ್ರಹ್ಮಣ್ಯ ಶೆಟ್ಟಿ ತಿಳಿಸಿದರು.

ಅವರು ಕುಂದಾಪುರ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.

ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡ್ಗಿ ಮಾತನಾಡಿ, ಧರ್ಮಸ್ಥಳ ಮತ್ತು ಹೆಗ್ಗಡೆಯವರ ಮೇಲೆ ಮಾಡಲಾಗುತ್ತಿರುವ ಅಪಪ್ರಚಾರವನ್ನು ಖಂಡಿಸುತ್ತಿವೆ. ಈ ಅಪಪ್ರಚಾರವನ್ನು ಯಾರೂ ನಂಬಬಾರದು. ಜನರು ಎಚ್ಚೆತ್ತುಕೊಳ್ಳಬೇಕು. ಇದು ಮತ್ತೆ ಪುನರಾವರ್ತನೆ ಆಗಬಾರದು. ಎಂದರು.

ಜನಜಾಗೃತಿ ವೇದಿಕೆಯ ನಿಕಟಪೂರ್ವ ಜಿಲ್ಲಾಧ್ಯಕ್ಷ ಆರ್.ನವೀನಚಂದ್ರ ಶೆಟ್ಟಿ ಮಾತನಾಡಿ, ಧಾರ್ಮಿಕ ಕ್ಷೇತ್ರದ ಮೇಲೆ ದಾಳಿಯಾದಾಗ ಪ್ರಜ್ಞಾವಂತರು ಎಚ್ಚೆತ್ತುಕೊಳ್ಳದಿದ್ದರೆ ದೊಡ್ಡ ದುರಂತವಾಗುತ್ತದೆ. ಈಗ ನಡೆಯುತ್ತಿರುವ ಅಪಪ್ರಚಾರವನ್ನು ತೀವ್ರವಾಗಿ ಖಂಡಿಸುತ್ತೇವೆ. ಸಾಮಾಜಿಕ ಪರಿವರ್ತನೆಯ ಮಾಡಿದ ಧಾರ್ಮಿಕ ಯುಗ ಪುರುಷ ವೀರೇಂದ್ರ ಹೆಗ್ಗಡೆಯವರ ಮೇಲೆ ಮಾಡಲಾಗುತ್ತಿರುವ ಅಪಪ್ರಚಾರ ಕೂಡಲೇ ನಿಲ್ಲಬೇಕು. ತಪ್ಪಿತಸ್ಥರ ಮೇಲೆ ಕ್ರಮವಾಗಬೇಕು ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆಯ ಡಾ.ಅತುಲ್ ಕುಮಾರ್ ಶೆಟ್ಟಿ ಮಾತನಾಡಿ, ವೀರೇಂದ್ರ ಹೆಗ್ಗಡೆಯವರು ಪೀಠಕ್ಕೆ ಬಂದ ಬಳಿಕ ಸಮಾಜದ ಸಶಕ್ತೀಕರಣದ ಕೆಲಸ ಮಾಡಿದವರು. ಗ್ರಾಮಾಭಿವೃದ್ಧಿಯ ಯೋಜನೆಯ ಮೂಲಕ ಕ್ರಾಂತಿ ಮಾಡಿದವರು. ತಿಳುವಳಿಕೆ ಇಲ್ಲದ ವ್ಯಕ್ತಿಗಳು ಅವರ ಹೆಸರನ್ನು ಎಳೆದು ತರುವುದು ಖಂಡನಾರ್ಹ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಕುಂದಾಪುರ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಉಮೇಶ ಶೆಟ್ಟಿ ಶಾನ್ಕಟ್ಟು ಮಾತನಾಡಿ, ಧರ್ಮಸ್ಥಳದ ಬಗ್ಗೆ ಜನ ವಿಶೇಷ ಪ್ರಾಧಾನ್ಯತೆ ಇಟ್ಟಿದ್ದಾರೆ. ಆಧಾರವಿಲ್ಲದೆ ಕ್ಷೇತ್ರದ ಬಗ್ಗೆ ಹೆಗ್ಗಡೆಯವರ ಬಗ್ಗೆ ಅಪಪ್ರಚಾರ ಮಾಡುವ ವ್ಯಕ್ತಿಗಳ ಮೇಲೆ ಕ್ರಮ ಆಗಬೇಕು, ಇಲ್ಲದಿದ್ದರೆ ಕ್ಷೇತ್ರದ ಭಕ್ತರಾಗಿ ಕಾನೂನು ಹೋರಾಟ ಮಾಡಲು ಸಿದ್ಧರಿದ್ದೇವೆ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆಯ ಪ್ರದೀಪಚಂದ್ರ ಶೆಟ್ಟಿ, ಶಶಿಧರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!