spot_img
Thursday, April 2, 2026
spot_img

ಬೈಂದೂರು ವಿಧಾನ ಸಭಾ ಕ್ಷೇತ್ರದ ಕುಮ್ಕಿ, ಸಿ.ಆರ್. ಜೆ.ಡ್, ಪೋರಂಬೊಕು ಮಿತಿಯ 94 ಸಿ ಅರ್ಜಿಗಳಿಗೆ ಹಕ್ಕುಪತ್ರ ಒದಗಿಸಲು ಶಾಸಕ ಗುರುರಾಜ್ ಒತ್ತಾಯ

ಬೈಂದೂರು: ಕರಾವಳಿ ಜಿಲ್ಲೆಗಳಲ್ಲಿ ವಿಶೇಷವಾಗಿ ಬೈಂದೂರು ವಿಧಾನ ಸಭಾಕ್ಷೇತ್ರ ವ್ಯಾಪ್ತಿಯಲ್ಲಿ 94 ಸಿ ಅಡಿ ಅರ್ಜಿ ಹಾಕಿಯೂ ಈವರೆಗೂ ಹಕ್ಕು ಪತ್ರ ಸಿಗದೇ ನೂರಾರು ಕುಟುಂಬಗಳು ವಿವಿಧ ಸರಕಾರಿ ಸೌಲಭ್ಯ ವಂಚಿತರಾಗಿದ್ದಾರೆ. ಕೂಡಲೇ ಸರಕಾರ ಹಕ್ಕುಪತ್ರ ವಿತರಿಸಬೇಕು ಎಂದು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಒತ್ತಾಯಿಸಿದ್ದಾರೆ.
 ವಿಧಾನಸಭೆಯಲ್ಲಿ ಶಾಸಕರು ಪ್ರಸ್ತಾಪಿಸಿದ ಚುಕ್ಕೆ ರಹಿತ  ಪ್ರಶ್ನೆಗೆ ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಉತ್ತರಿಸಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿ.ಆರ್.ಜೆಡ್ ಹಾಗೂ ಪೋರಂಬೊಕು ಸ್ಥಳವನ್ನು ಅಕ್ರಮಿಸಿ ಒಟ್ಟು 1428 ಅರ್ಜಿ ಗಳಿವೆ. ಬೈಂದೂರು ಹಾಗೂ ಕುಂದಾಪುರ ತಾಲೂಕಿನಲ್ಲಿ 261 ಅರ್ಜಿಗಳು ಹಾಗೂ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕುಮ್ಕಿ ಮಿತಿಯಲ್ಲಿ  94 ಸಿ ಅಡಿ ಒಟ್ಟು 849 ಅರ್ಜಿಗಳು ವಿಲೇವಾರಿಗೆ ಬಾಕಿಯಿದೆ ಎಂದರು.
ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕುಮ್ಕಿ ಮಿತಿ, ಪೋರಂಬೊಕು ಹಾಗೂ ಸಿ.ಆರ್.ಜೆಡ್ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಮನೆ ಕಟ್ಟಿ ವಾಸವಿದ್ದು  94 ಸಿ ಅರ್ಜಿ ಹಾಕಿರುವ ಎಲ್ಲಾ ಕುಟುಂಬಗಳಿಗೆ ಹಕ್ಕು ಪತ್ರ ಒದಗಿಸಲು ಬೈಂದೂರು ಶಾಸಕರು ಪ್ರಶ್ನೆ ಮೂಲಕ ಸದನದಲ್ಲಿ ಪ್ರಸ್ತಾಪಿಸಿರುವ ಜತೆಗೆ ಕಂದಾಯ ಸಚಿವರಿಗೂ ಪತ್ರ ಮುಖೇನ ಮನವಿ ಮಾಡಿದ್ದಾರೆ

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!